Breaking News

ಡಿ.27, 28 ದೇಂತಡ್ಕ ಶ್ರೀ ವಿಷ್ಣುಮೂರ್ತಿ ದೇವಳದ ವಾರ್ಷಿಕ ಜಾತ್ರೋತ್ಸವ, ಚಂಡಿಕಾಹವನ, ಮಹಾವಿಷ್ಣುಯಾಗ

Puttur_Advt_NewsUnder_1
Puttur_Advt_NewsUnder_1

 

denthadka1denthadka2ಪುತ್ತೂರು: ಪೆರ್ನೆ, ಬಿಳಿಯೂರು ಗ್ರಾಮಕ್ಕೆ ಸಂಬಂಧಿಸಿದ ಬಿಳಿಯೂರು ಗ್ರಾಮದ ಕಳೆಂಜ ದೇಂತಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ದ.27 ಮತ್ತು ದ.28 ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಾರ್ಷಿಕ ಜಾತ್ರೋತ್ಸವ, ಚಂಡಿಕಾಹವನ, ಮಹಾವಿಷ್ಣುಯಾಗ ಹಾಗೂ ವಾರ್ಷಿಕ ಪ್ರತಿಷ್ಠಾಮಹೋತ್ಸವ ನಡೆಯಲಿದೆ ಎಂದು ದೇವಳದ ಆಡಳಿತ ಮೊಕ್ತೇಸರ ಚಂದಪ್ಪ ಪೂಜಾರಿ ತಿಳಿಸಿದ್ದಾರೆ.

ದ.21 ರಂದು ಗೊನೆಮುಹೂರ್ತ ನಡೆಯಿತು. ದ.27 ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಪುಣ್ಯಾಹವಾಚನ, ಮಹಾಗಣಪತಿ ಹೋಮ, ಚಂಡಿಕಾ ಹೋಮ, ಮಹಾವಿಷ್ಣುಯಾಗ ನಡೆಯಲಿದ್ದು ವಿಷ್ಣುಮೂರ್ತಿ ದೇವಸ್ಥಾನ ಪ್ರಧಾನ ಅರ್ಚಕರಾದ ಗೋಪಾಲಕೃಷ್ಣ ಭಟ್ ಉಗ್ರಾಣ ಮುಹೂರ್ತ ನಡೆಸಲಿದ್ದಾರೆ. ಬಳಿಕ ಭಕ್ತಾದಿಗಳಿಂದ ಹಸಿರು ಹೊರೆ ಕಾಣಿಕೆ ಸಮರ್ಪಣೆ, ತುಲಾಭಾರ ಸೇವೆ, ಹೋಮದ ಪೂರ್ಣಾಹುತಿ, ಸುವಾಸಿನಿ ಪೂಜೆ, ಕಲಶಾಭಿಷೇಕ ನಡೆಯಲಿದೆ. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಧಾರ್ಮಿಕ ಸಭೆ: ಸಂಜೆ ದೇವಳದ ವಠಾರದಲ್ಲಿ ಧಾರ್ಮಿಕ ಸಭೆ ನಡೆಯಲಿದ್ದು ಅಧ್ಯಕ್ಷತೆಯನ್ನು ಮರ್ದಾಳಬೀಡು ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಸನತ್ ಕುಮಾರ್ ಬಳ್ಳಾಲ್ ವಹಿಸಲಿದ್ದು, ಬ್ರಹ್ಮಶ್ರೀ ಕೆಮ್ಮಿಂಜೆ ಕಾರ್ತಿಕ ತಂತ್ರಿಗಳು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಪೆರ್ನೆ ಶ್ರೀ ರಾಮಚಂದ್ರ ಪದವಿ ಪೂರ್ವ ವಿದ್ಯಾಲಯದ ಸಂಚಾಲಕ ಹರೀಶ್ ಭಂಡಾರಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಾತ್ರಿ ಸ್ವಾತಿ ಜೈನ್ ಮತ್ತು ಬಳಗ ಬಿಳಿಯೂರುಗುತ್ತು ಇವರಿಂದ ಭಕ್ತಿರಸಮಂಜರಿ, ಬಳಿಕ ಶ್ರೀ ವಿಷ್ಣು ಕಲಾತಂಡ ಪೆರ್ನೆ ಕಳೆಂಜ ಇವರಿಂದ ಮಂತಿನ ತಪ್ಪುದಾದ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ.

ದ.28 ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಶ್ರೀ ದೇವರಿಗೆ ಕಲಶಾಭಿಷೇಕ, ಕ್ಷೇತ್ರದ ದೈವಗಳಿಗೆ ಹಾಗೂ ನಾಗದೇವರಿಗೆ ತಂಬಿಲ ಸೇವೆ ನಡೆಯಲಿದೆ. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಮಹಾಪೂಜೆ ಬಳಿಕ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ, ದರ್ಶನ ಬಳಿ, ಬಟ್ಟಲು ಕಾಣಿಕೆ, ಬೆಡಿ ಪ್ರದರ್ಶನ ನಡೆಯಲಿದೆ. ಬಳಿಕ ಸಾಂಸ್ಕೃತಿಕ ಕಾರ‍್ಯಕ್ರಮದ ಅಂಗವಾಗಿ ತೆಲಿಕೆದ ರಂಗ ಕಲಾವಿದೆರ್ ಪುತ್ತೂರು ಇವರಿಂದ ಸತ್ಯದ ಬೊಲ್ಪು(ಧರ್ಮದ ಸಾದಿಗ್) ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.