ರೆಖ್ಯ ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ವಿತರಣೆ

Puttur_Advt_NewsUnder_1
Puttur_Advt_NewsUnder_1

rekhya1ಕಡಬ: ರೆಖ್ಯ ಗ್ರಾಮದ ಗುಡ್ರಾಡಿ ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನದಲ್ಲಿ ಜ.7 ರಿಂದ 13 ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರವನ್ನು ಕೊಂಬಾರು ಬೀಡು ಶ್ರೀ ಸಿದ್ದಪ್ಪ ದೇವರು ಉಳ್ಳಾಕ್ಲು ಬಚ್ಚನಾಯಕ ದೈವಸ್ಥಾನದ ಆಡಳಿತ ಮೊಕ್ತೇಸರ ಪಟೇಲ್ ಸುಬ್ರಾಯ ಗೌಡ ಕೂತೂರು, ಅಧ್ಯಕ್ಷ ಗುಡ್ಡಪ್ಪ ಗೌಡ ಕೂತೂರು, ಕೆಂಜಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಪ್ರಸನ್ನ ಕುಮಾರ್‌ರವರಿಗೆ ದೇವಸ್ಥಾನದ ಆಡಳಿತ ಮಂಡಳಿ ಪದಾಧಿಕಾರಿಗಳು ನೀಡಿ ಕಾರ‍್ಯಕ್ರಮಕ್ಕೆ ಆಗಮಿಸುವಂತೆ ವಿನಂತಿಸಿಕೊಂಡರು. ಗುಡ್ರಾಮಲ್ಲೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಮಂಜುನಾಥ ಗೌಡ ಕೈಕುರೆ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ‍್ಯಾಧ್ಯಕ್ಷ ಬಾಲಕೃಷ್ಣ ಗೌಡ ನೆಲ್ಯಾಡಿ, ಆಡಳಿತ ಮಂಡಳಿ ಮತ್ತು ಜೀರ್ಣೋದ್ದಾರ ಸಮಿತಿ ಪ್ರಧಾನ ಕಾರ‍್ಯದರ್ಶಿ ಸದಾಶಿವನ್ ಟಿ.ಕೆ, ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷ ಕುಶಾಲಪ್ಪ ಗೌಡ ಪಾಪುತಮಂಡೆ ಸೇರಿದಂತೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.