Breaking News

ಶೇವಿರೆ: ಮಾನಸಿಕ ಅಸ್ವಸ್ಥೆ ಲೀಲಾವತಿ ಬಾವಿಗೆ ಹಾರಿ ಆತ್ಮಹತ್ಯೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮಗಳ ಸಾವಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದ.27ರಂದು ಕಬಕ ಗ್ರಾಮದ ಶೇವಿರೆ ಎಂಬಲ್ಲಿ ನಡೆದಿದೆ. ಶೇವಿರೆ ಅಣ್ಣಿಯವರ ಪತ್ನಿ ಲೀಲಾವತಿ(56.ವ) ಆತ್ಮಹತ್ಯೆಗೈದವರು. ಇವರ ಪುತ್ರಿ ಸುಮಾರು 10 ವರ್ಷಗಳ ಹಿಂದೆ ಸಾವನ್ನಪ್ಪಿದ್ದರು. ಇದರಿಂದಾಗಿ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಈ ಹಿಂದೆ ಎರಡು ಬಾರಿ ಅವರು ಆತ್ಮಹತ್ಯೆಗೂ ಯತ್ನಿಸಿದ್ದರು ಎನ್ನಲಾಗಿದೆ. ದ.27ರಂದು ಅವರು ಮನೆ ಸಮೀಪದ ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಪುತ್ರ ಆನಂದರವರು ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.