’ಸಂತೆ ವಿಚಾರದಲ್ಲಿ ಮೂಗು ತೂರಿಸುವುದು ಬೇಡ’ವೆಂಬ ನಗರಸಭಾಧ್ಯಕ್ಷರ ಹೇಳಿಕೆಗೆ ವರ್ತಕ ಸಂಘ ಖಂಡನೆ- ಹೇಳಿಕೆ ಹಿಂಪಡೆಯದಿದ್ದಲ್ಲಿ ಸಂಘದಿಂದ ಮುಂದಿನ ಕ್ರಮ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸಂತೆಯನ್ನು ಅದಿತ್ಯವಾರ ಮಾಡುವ ಕುರಿತು ನಗರಸಭೆ ಅಧ್ಯಕ್ಷರು ತಿಳಿಸಿದ ವಿಚಾರಕ್ಕೆ ಸಂಬಂಧಿಸಿ ವರ್ತಕ ಸಂಘದವರು ಸಂತೆ ಸೋಮವಾರವೇ ನಡೆಯಬೇಕೆಂದು ಸಹಾಯಕ ಕಮಿಷನರ್‌ಗೆ ಮನವಿ ಮಾಡಿದ್ದರು. ಸಂತೆ ವಿಚಾರದಲ್ಲಿ ವರ್ತಕ ಸಂಘದವರು ಮೂಗು ತೂರಿಸುವುದು ಬೇಡ ಎಂದು ನಗರಸಭಾಧ್ಯಕ್ಷರು ಪತ್ರಿಕಾ ಹೇಳಿಕೆ ನೀಡಿರುವುದಕ್ಕೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಖಂಡನೆ ವ್ಯಕ್ತಪಡಿಸಿದೆ.

ಕಳೆದ ೩೮ ವರ್ಷಗಳಿಂದ ನಮ್ಮ ಸಂಸ್ಥೆಯು ಸಾರ್ವಜನಿಕ ಮತ್ತು ವರ್ತಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟು ಕೊಂಡು ಸಮಸ್ಯೆಗಳ ಪರಿಹಾರಕ್ಕಾಗಿ ಯಾವುದೇ ಪಕ್ಷಪಾತವಿಲ್ಲದೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ. ಈ ಹಿಂದೆ ರೈಲ್ವೇ ಹೋರಾಟ, ವಿದ್ಯುಚ್ಛಕ್ತಿ ಸಮಸ್ಯೆ, ನೀರು, ಎಪಿಎಂಸಿ ಸಮಸ್ಯೆ, ನೇತ್ರಾವತಿ ನದಿ ತಿರುವಿನ ಬಗ್ಗೆ, ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಬಗ್ಗೆ ಮುಂಚೂಣಿಯಲ್ಲಿದ್ದು ಕೊಂಡು ನ್ಯಾಯಯುತ ಹೋರಾಟವನ್ನು ನಡೆಸುತ್ತಾ ಬಂದಿದೆ. ಪುರಸಭೆ/ನಗರಸಭೆಯ ಸಾರ್ವಜನಿಕ ಹಿತಾಸಕ್ತಿ ಸಭೆಗಳಲ್ಲೂ ನಮ್ಮ ಸಂಘವು ಪ್ರಮುಖ ಅಭಿವೃದ್ಧಿ ಪರ ಸಲಹೆಗಳನ್ನು ನೀಡುತ್ತಾ ಬಂದಿದೆ. ಜೊತೆಗೆ ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಇದೆ. ಈ ನಿಟ್ಟಿನಲ್ಲಿ ಪತ್ರಿಕಾ ಹೇಳಿಕೆಯ ಮೂಲಕ ಸಂಸ್ಥೆಗೆ ಅವಮಾನಕರ ಹೇಳಿಕೆಯನ್ನು ನೀಡಿರುವುದನ್ನು ಖಂಡಿಸುತ್ತೇವೆ. ತಮ್ಮ ಹೇಳಿಕೆಯನ್ನು ಹಿಂದೆ ಪಡೆಯದಿದ್ದಲ್ಲಿ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘವು ಮುಂದಿನ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಭಾಸ್ಕರ್ ಬಾರ್ಯರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.