Breaking News

ಕೆಎಂಸಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯ ನೂತನ ಕಟ್ಟಡ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1

kmc

ರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ಉತ್ತಮ ಸೇವೆ ಸಿಗಲಿ-ರಕ್ಷಣಾ ಸಚಿವ ಮನೋಹರ ಪರಿಕ್ಕರ್

ಮಂಗಳೂರು: ದೇಶದ ಎಲ್ಲ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಬಡರೋಗಿಗಳಿಗೆ ಕಡಿಮೆ ಖರ್ಚಿನಲ್ಲಿ ಉತ್ತಮ ಗುಣಮಟ್ಟದ ಸೇವೆ ಸಿಗುವಂತಾಗಬೇಕೆಂದು ಕೇಂದ್ರ ರಕ್ಷಣಾ ಸಚಿವ ಮನೋಹರ ಪರಿಕ್ಕರ್ ಸಲಹೆ ನೀಡಿದರು.

ನಗರದ ಕೆಎಂಸಿ ಆಸ್ಪತ್ರೆಯ ವತಿಯಿಂದ ಸ್ಥಾಪಿಸಲಾದ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ವೈದ್ಯಕೀಯ ಕ್ಷೇತ್ರ ಮಹತ್ವದ ಸ್ಥಾನ ಪಡೆದುಕೊಂಡಿದೆ. ಯಾರನ್ನು ನಂಬದೇ ಹೋದರೂ ವೈದ್ಯರ ಮೇಲೆ ಭರವಸೆ ಇಡುತ್ತಿದ್ದಾರೆ. ಆ ನಂಬಿಕೆ ಉಳಿಸಿ ಕೊಳ್ಳುವುದು ವೈದ್ಯರ ಜವಾಬ್ದಾರಿ. ಈ ನಿಟ್ಟಿನಲ್ಲಿ ಜನಸಾಮಾನ್ಯರು, ಬಡವರ್ಗದವರು ಕಷ್ಟವೆಂದು ಆಸ್ಪತ್ರೆಗೆ ಬಂದಾಗ ಅವರೊಂದಿಗೆ ಉತ್ತಮವಾಗಿ ಸ್ಪಂದನೆ ನೀಡಬೇಕು ಎಂದರು.  ಗೋವಾ ಸರಕಾರ ಅಲ್ಲಿನ ೬ರಿಂದ ೭ ಸಾವಿರ ಬಡವರಿಗಾಗಿ ಉಚಿತ ಮೆಡಿಕ್ಲೇಮ್ ಯೋಜನೆಯನ್ನು ಜಾರಿ ಮಾಡಿದೆ. ಸರಕಾರಿ ಹಾಗೂ ಆಯ್ದ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವ ಈ ಯೋಜನೆಯ ೩೦ ಕೋಟಿ ರೂ ವೆಚ್ಚವನ್ನು ಸರಕಾರವೇ ಭರಿಸುತ್ತದೆ ಎಂದು ಪರಿಕ್ಕರ್ ತಿಳಿಸಿದರು.

ಎಲ್ಲ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ನಗದು ರಹಿತ ವಹಿವಾಟು ನಡೆಯುವಂತಾಗಬೇಕು. ದೇಶದಲ್ಲಿಯೇ ಮೊದಲ ಬಾರಿಗೆ ಎಂಬಂತೆ ಗೋವಾ ನಗದು ರಹಿತ ವ್ಯವಸ್ಥೆಯನ್ನು ಜಾರಿಗೆ ತಂದಿದೆ.  ಈ ವ್ಯವಸ್ಥೆ ಎಲ್ಲ ಕಡೆಗಳಲ್ಲೂ ಜಾರಿಯಾಗುವಂತಾಗಬೇಕೆಂದು ಸಲಹೆ ನೀಡಿದರು.

ಅತ್ಯಾಧುನಿಕ ಕ್ಯಾನ್ಸರ್ ನಿವಾರಣಾ ಚಿಕಿತ್ಸಾ ಘಟಕವನ್ನು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಉದ್ಘಾಟಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಜೆ.ಆರ್.ಲೋಬೋ, ಮಣಿಪಾಲ ವಿವಿ ಕುಲಪತಿ ಡಾ.ಎಚ್.ಎಸ್.ಬಲ್ಲಾಳ್, ಮಣಿಪಾಲ ಆಸ್ಪತ್ರೆಯ ಅಧ್ಯಕ್ಷ ಡಾ.ಸುದರ್ಶನ ಬಲ್ಲಾಳ್ ಇದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.