ಉಪ್ಪಿನಂಗಡಿ ಬಸ್ಸು ನಿಲ್ದಾಣವನ್ನು ವಾಣಿಜ್ಯ ಸಂಕೀರ್ಣವನ್ನಾಗಿಸದೆ ಪ್ರಯಾಣಿಕರ ತಂಗುದಾಣವಾಗಿ ಮುಂದುವರಿಸಿ-ಗ್ರಾ.ಪಂ.ಅಧ್ಯಕ್ಷರಿಗೆ ಆಮ್ ಆದ್ಮಿ ಮನವಿ

Puttur_Advt_NewsUnder_1
Puttur_Advt_NewsUnder_1

uppinangady-busಉಪ್ಪಿನಂಗಡಿ: ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣ ಮಾಡದೇ ಪ್ರಯಾಣಿಕರ ತಂಗುದಾಣವಾಗಿ ಮುಂದುವರಿಸಿ ಎಂದು ಆಮ್ ಆದ್ಮಿ ಪಕ್ಷದ ಪುತ್ತೂರು ವಿಧಾನಸಭಾ ಕ್ಷೇತ್ರದ ಸಂಚಾಲಕ ಆನಂದ ಗೌಡರವರು ಉಪ್ಪಿನಂಗಡಿ ಗ್ರಾ.ಪಂ.ಅಧ್ಯಕ್ಷರಿಗೆ ಮನವಿ ಸಲ್ಲಿಸಿದ್ದಾರೆ.

ಉಪ್ಪಿನಂಗಡಿ ಬಸ್ಸು ನಿಲ್ದಾಣಕ್ಕೆ ಪ್ರತಿ ದಿನ ಸಾವಿರಾರು ಪ್ರಯಾಣಿಕರು ಬಂದು ಹೋಗುತ್ತಾರೆ. ಈ ನಿಲ್ದಾಣವು ಕೆಲವು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಪ್ರತಿದಿನ ಇಲ್ಲಿಗೆ ರಾಜ್ಯ, ಹೊರ ರಾಜ್ಯಗಳಿಂದ ಬಸ್ಸುಗಳು ಬಂದು ಹೋಗುತ್ತಿವೆ. ಆದರೂ ಈ ಬಸ್ಸು ನಿಲ್ದಾಣವನ್ನು ವಾಣಿಜ್ಯ ಕಟ್ಟಡವಾಗಿ ಪರಿವರ್ತಿಸಲು ಪ್ರಯತ್ನಗಳು ನಡೆಯುತ್ತಿವೆ. ಅದಕ್ಕೆ ಸಾಕ್ಷಿ ಎಂಬಂತೆ ಬಸ್ಸು ನಿಲ್ದಾಣದಲ್ಲಿ ನಾಲ್ಕು ಅಂಗಡಿ ಕೋಣೆಗಳನ್ನು ಕಟ್ಟಲಾಗಿದೆ. ಇದರಿಂದ ಇಲ್ಲಿ ಜಾಗದ ಕೊರತೆ ಉಂಟಾಗಿ ಪ್ರಯಾಣಿಕರಿಗೆ ತೊಂದರೆಯಾಗಲಿದೆ. ಆದ್ದರಿಂದ ಇಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣ ಮಾಡಬಾರದು. ಈಗಾಗಲೇ ನಿರ್ಮಾಣಗೊಂಡಿರುವ ನಾಲ್ಕು ಕೋಣೆಗಳ ಪೈಕಿ ಒಂದನ್ನು ಹಿರಿಯ ನಾಗರಿಕರಿಗೆ, ಇನ್ನೊಂದನ್ನು ಪುರುಷರಿಗೆ ಹಾಗೂ ಉಳಿದ ಎರಡು ಕೋಣೆಗಳನ್ನು ಮಹಿಳೆಯರಿಗೆ ವಿಶ್ರಾಂತಿ ಕೊಠಡಿಯಾಗಿ ಮಾಡುವಂತೆ ಆನಂದ ಗೌಡರವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.