ಡಿ.31 ರಂದು ಕಾವು ಬುಶ್ರಾ ವಿದ್ಯಾಸಂಸ್ಥೆಯ 18ನೇ ವಾರ್ಷಿಕೋತ್ಸವ

Puttur_Advt_NewsUnder_1
Puttur_Advt_NewsUnder_1

bushraಪುತ್ತೂರು: ಬುಶ್ರಾ ಎಜುಕೇಶನಲ್ ಟ್ರಸ್ಟ್ ಆಡಳಿತದಲ್ಲಿರುವ ಬುಶ್ರಾ ಪ.ಪೂ ಕಾಲೇಜು, ಆಂಗ್ಲಮಾಧ್ಯಮ ಪ್ರೌಢಶಾಲೆ, ಹಿರಿಯ ಪ್ರಾಥಮಿಕ, ಕಿರಿಯ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ವಿದ್ಯಾಸಂಸ್ಥೆಯ 18ನೇ ವಾರ್ಷಿಕೋತ್ಸವ ದ.31ರಂದು ಶಾಲಾ ರಂಗಮಂದಿರದಲ್ಲಿ ನಡೆಯಲಿದೆ. ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಅಝೀಝ್ರವರು ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ ವಿದ್ಯಾರ್ಥಿಗಳಿಗೆ ಛದ್ಮವೇಷ ಸ್ಪರ್ಧೆ ನಡೆಯಲಿದೆ. ಸಂಜೆ ಮಕ್ಕಳಿಂದ ನೃತ್ಯ ವೈಭವ ನಡೆಯಲಿದೆ. ಬಳಿಕ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಅಝೀಝ್ರವರು ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕಿ, ರಾಜ್ಯ ಸಂಸದೀಯ ಕಾರ್ಯದರ್ಶಿಯೂ ಆಗಿರುವ ಶಕುಂತಳಾ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಜಿ.ಎಸ್, ಮೈಸೂರು ಎಸ್‌ಎಲ್‌ವಿ ಬ್ಲಾಕ್‌ನ ಎಜೆನ್ಸಿ ದಿವಾಕರ ದಾಸ್ ಕಂಬಳಬೆಟ್ಟು, ದರ್ಬೆ ಏಷ್ಯನ್‌ವುಡ್ ಮತ್ತು ನ್ಯೂ ಮಂಗಳೂರು ಇಲೆಕ್ಟ್ರಾನಿಕ್ಸ್‌ನ ಮಾಲಕ ಜನಾಬ್ ಜಬ್ಬಾರ್, ಮಂಗಳೂರು ಮಣಿಪಾಲ್ ಗ್ರೂಪ್‌ನ ಅಸಿಸ್ಟೆಂಟ್ ಹೆಚ್‌ಆರ್ ಜನಾಬ್ ಖಲಂದರ್ ಶಾಫಿಯವರು ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಜೆಸಿಐ ಇಂಡಿಯಾದ ರಾಷ್ಟ್ರೀಯ ತರಬೇತುದಾರ ಕೃಷ್ಣಮೋಹನ ಪಿ.ಎಸ್‌ರವರು ಮುಖ್ಯ ಭಾಷಣ ಮಾಡಲಿದ್ದಾರೆ. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.