ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯಿಂದ ಸಂಭವನೀಯ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವಿವಿಧ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳ ಶೇಕಡ 75 ಮತ್ತು ಹುದ್ದೆಗೆ ನಿಗದಿಪಡಿಸಲಾಗಿರುವ ವಿದ್ಯಾರ್ಹತೆಯಲ್ಲಿ ಗಳಿಸಿರುವ ಅಂಕಗಳ ಶೇಕಡ 25ಗಳನ್ನು ಸೇರಿಸಿ, ಒಟ್ಟಾರೆ ಶೇಕಡಾವಾರು ಅಂಕಗಳ ಅರ್ಹತಾನುಸಾರ ಮತ್ತು ಮೀಸಲಾತಿ ನಿಯಮಾನುಸಾರ ಈ ಸಂಭವನೀಯ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಮೂಲದಾಖಲಾತಿ ಮತ್ತು ದೇಹದಾರ್ಢ್ಯ ಪರೀಕ್ಷೆಗೆ ಹಾಜರಾಗಬೇಕಿರುತ್ತದೆ. ಈ ಬಗ್ಗೆ ಸದ್ಯವೇ ಸಂಸ್ಥೆಯು ಮಾಹಿತಿ ನೀಡಲಿದೆ. ಅರ್ಹತಾ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಆಸಕ್ತರು ಆಗಸ್ಟ್ 6ರ ಒಳಗೆ ಲಿಖಿತವಾಗಿ ಸಂಸ್ಥೆಯ ನೇಮಕಾತಿ ಶಾಖೆಗೆ ತಮ್ಮ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ.

ವೆಬ್‌ನಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ಮಾಹಿತಿಯನ್ನೂ ಒದಗಿಸಲಾಗಿದ್ದು, ಅಭ್ಯರ್ಥಿಗಳು ಲಾಗಿನ್ ಆಗಿ ತಮ್ಮ ಅಂಕವನ್ನು ನೋಡಬಹುದಾಗಿದೆ.

ಹೆಚ್ಚಿನ ವಿವರಗಳಿಗಾಗಿ ವೆಬ್‌ಸೈಟ್: www.mybmtc.com

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಸುದ್ದಿ ತರಬೇತಿ ಕೇಂದ್ರ, ಎಂ.ಟಿ ರಸ್ತೆ ಪುತ್ತೂರು. ಫೋ: 08251-238949 | 7829503541

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.