ಕೊಯ್ಯೂರು: ರಾಜ್ಯ ಮಲೆಕುಡಿಯ ಸಂಘದ ಕಾರ್ಯಕಾರಿಣಿ ಸಭೆ

0

ಕೊಯ್ಯೂರು: ರಾಜ್ಯ ಮಲೆಕುಡಿಯ ಸಂಘದ ಕಾರ್ಯಕಾರಿಣಿ ಸಭೆಯು ಬೆಳ್ತಂಗಡಿ ತಾಲೂಕಿನ ಕೊಯ್ಯೂರಿನ ಶಿವಗಿರಿಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀಧರ್ ಗೌಡ ಈದು ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಜಾತಿ ಪ್ರಮಾಣ ಪತ್ರದಲ್ಲಿರುವ ಗೊಂದಲಗಳ ನಿವಾರಣೆ, ರಾಜ್ಯ ಮಲೆಕುಡಿಯ ಸಂಘದ ಉದ್ಘಾಟನೆ, ಸಮುದಾಯ ಭವನಗಳ ನಿರ್ಮಾಣ, ಮತ್ತು ಚಿಕ್ಕಮಗಳೂರು ಜಿಲ್ಲೆಯ ಮಲೆಕುಡಿಯ ಜನಾಂಗದವರಿಗೆ ಪೌಷ್ಟಿಕ ಆಹಾರ ಒದಗಿಸುವ ಬಗ್ಗೆ ಚರ್ಚೆ ನಡೆಸಿ ರೂಪು ರೇಷೆಗಳನ್ನು ಸಿದ್ದಪಡಿಸಲಾಯಿತು.

ರಾಜ್ಯ ಸಂಘದ ಪದಾಧಿಕಾರಿಗಳು, ಜಿಲ್ಲಾ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಉಪಸ್ಥಿತರಿದ್ದರು. ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಕೆ ಪೊಳಲಿ ಸ್ವಾಗತಿಸಿ, ರಾಜ್ಯ ಸಮಿತಿಯ ಉಪಾಧ್ಯಕ್ಷೆ ವಸಂತಿ ನೆಲ್ಲಿಕಾರು ವಂದಿಸಿದರು.

LEAVE A REPLY

Please enter your comment!
Please enter your name here