ಶ್ರೀ ಕ್ಷೇತ್ರ ಓಡಿಲು 32 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

0

ಪಡಂಗಡಿ :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಕ್ಷೇತ್ರ ಓಡಿಲು ಇದರ ಆಶ್ರಯದಲ್ಲಿ ಪಡಂಗಡಿ, ಕುವೆಟ್ಟು ಓಡಿಲ್ನಾಳ ಮತ್ತು ಸೋಣಂದೂರು ಗ್ರಾಮಸ್ಥರ ಸಹಕಾರದಲ್ಲಿ ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ 32 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆ.31 ರಿಂದ ಸೆ.2 ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು . ಆ.31 ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗಣಹೋಮ, ಶುದ್ದಿ, ಗಣಹೋಮ, ಗಣಪತಿ ಪ್ರತಿಷ್ಠೆಯ ಬಳಿಕ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ ವಹಿಸಿದ್ದರು.

ನಾವೂರು ಆರೋಗ್ಯ ಕ್ಲಿನಿಕ್ ನ ಡಾ. ಪ್ರದೀಪ್ ಧಾರ್ಮಿಕ ಉಪನ್ಯಾಸ ನೀಡಿದರು. ಶ್ರೀ ಕ್ಷೇತ್ರ ಓಡಿಲು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಿದಾನಂದ ಇಡ್ಯಾ,ಗಣೇಶೋತ್ಸವ ಸಮಿತಿಯ ಗೌರವ ಅಧ್ಯಕ್ಷ ಕೆ. ವಿಜಯ ಸಾಲಿಯಾನ್ ಪಣಕಜೆ ವೇದಿಯಲ್ಲಿ ಉಪಸ್ಥಿತರಿದ್ದರು.

ಭಜನಾ ಸಮಿತಿ ಅಧ್ಯಕ್ಷ ಸಂದೇಶ್ ಅನಿಲ ಸ್ವಾಗತಿಸಿ, ಕಾರ್ಯದರ್ಶಿ ಸಂತೋಷ ಶೆಟ್ಟಿ ಪುರಿಪಟ್ಟ ವಂದಿಸಿದರು,ಸತೀಶ್ ಆಚಾರ್ಯ ಪನಕಜೆ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಮಹಾಪೂಜೆ,ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಭಜನೆ, ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು , ಸೆ.1ಬೆಳಿಗ್ಗೆ ಗಣಹೋಮ ದೇವಸ್ಥಾನದಲ್ಲಿ 48 ಕಾಯಿ ಗಣಹೋಮ, ಮಹಾ ಪೂಜೆ, ಅನ್ನಸಂತರ್ಪಣೆ ನಡೆಯಿತು.

LEAVE A REPLY

Please enter your comment!
Please enter your name here