ಬೆಳಾಲು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

0

ಬೆಳಾಲು: ನಮ್ಮ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಪ್ರೇರಣೆ ನೀಡುತ್ತದೆ. ವಿದ್ಯಾರ್ಥಿಗಳು ತಮ್ಮ ಜೀವನದ ಯಶಸ್ಸಿಗೆ ಸಣ್ಣ ಸಣ್ಣ ಗುರಿಯೊಂದಿಗೆ, ಸ್ಪಷ್ಟವಾದ ದಿನಚರಿ ಹಾಕಿಕೊಂಡು ಸಾಗಬೇಕು. ಮೇಜರ್ ಧ್ಯಾನಚಂದ್ ಅಂತಹ ಓರ್ವ ಮಹಾನ್ ಪ್ರತಿಭೆ. ಗುರಿಯೊಂದಿಗೆ ನಿರಂತರ ಪರಿಶ್ರಮ,ಕ್ರಿಯಾಶೀಲ ಮನಸ್ಸು ಅವರ ವಿಶೇಷತೆ. ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಮೂಲಕ ಧ್ಯಾನ್ ಚಂದ್ ರವರ ಬದುಕಿನ ಹಾದಿ, ವಿದ್ಯಾರ್ಥಿಗಳ ಜೀವನದ ಯಶಸ್ಸಿಗೆ ಮಾರ್ಗದರ್ಶನವಾಗಲಿ ಎಂದು ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಕ್ರೀಡಾ ನಿರ್ದೇಶಕರಾದ ಡಾ. ಶೈಲೇಶ್ ಕುಮಾರ್ ರವರು ಅಭಿಪ್ರಾಯಪಟ್ಟರು.

ಅವರು ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಾ ಧ್ಯಾನ್ ಚಂದ್ ರವರ ವ್ಯಕ್ತಿತ್ವ ವಿಶೇಷತೆ ಬಗ್ಗೆ ತಿಳಿಸಿದರು.

ಶಾಲಾ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಸಂಯೋಜಕರಾದ ಶಾಲೆಯ ಶಾರೀರಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದರವರು ಸ್ವಾಗತಿಸಿ ರವಿಚಂದ್ರ ಜೈನ್ ರವರು ವಂದಿಸಿದರು.

ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕ ಸಿಬ್ಬಂದಿಯವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here