ಎಕ್ಸೆಲ್ ನಲ್ಲಿ ಪ.ಪೂ. ಕಾಲೇಜಿನಲ್ಲಿ ಪಾಲಕ-ಶಿಕ್ಷಕ ಸಭೆ

0

ಎಕ್ಸೆಲ್ ಪದವಿಪೂರ್ವ ಕಾಲೇಜು ಗುರುವಾಯನಕೆರೆಯ ಪ್ರಸಕ್ತ ಶೈಕ್ಷಣಿಕ ವರ್ಷದ ಪಾಲಕ-ಶಿಕ್ಷಕರ ಸಭೆಯು ಸೆ. 3 ರಂದು ಸಂಸ್ಥೆಯ ವಠಾರದಲ್ಲಿ ನಡೆಯಿತು.

ಸಂಸ್ಥೆಯ ಅಧ್ಯಕ್ಷ  ಸುಮಂತ್ ಕುಮಾರ್ ಜೈನ್ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳ ಶಿಸ್ತುಪಾಲನೆಯಲ್ಲಿ ಪೋಷಕರ ಪಾತ್ರದ ಬಗ್ಗೆ ವಿವರಿಸಿದರು. ಖ್ಯಾತ ಸಾಹಿತಿ ಮತ್ತು ಶಿಕ್ಷಣ ತಜ್ಞ  ಅರವಿಂದ ಚೊಕ್ಕಾಡಿ ಯವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ವಿದ್ಯಾರ್ಥಿ ಹಾಗೂ ಪೋಷಕರಿಗೆ ಶೈಕ್ಷಣಿಕ ಮಾರ್ಗದರ್ಶನ ನೀಡಿದರು. ಸಂಸ್ಥೆಯ ಅಧ್ಯಕ್ಷ  ಸುಮಂತ್ ಕುಮಾರ್ ಜೈನ್ ಹಾಗೂ ಕಾರ್ಯದರ್ಶಿ  ಅಭಿರಾಮ್. ಬಿ.ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕ  ವಿಕಾಸ್ ಹೆಬ್ಬಾರ್ ಸ್ವಾಗತಿಸಿದರು. ಉಪನ್ಯಾಸಕಿ ಶ್ರೀಮತಿ ಪ್ರಸಾದಿ ವಂದಿಸಿದರು. ಶ್ರೀಮತಿ ಶಾಂತಿಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here