ಉಜಿರೆ ಶ್ರೀ.ಧ.ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ’

0

ಉಜಿರೆ : ಶ್ರೀಧಮಂ, ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಸೆ.2 ರಂದು ನಡೆದವು, ಉದ್ಘಾಟನೆಯನ್ನು ಉಜಿರೆ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಾಧಿಕಾರಿ ಹರೀಶ್ ಎಂ ವೈ. ನೆರವೇರಿಸಿದರು. ಅಧ್ಯಕ್ಷತೆಯನ್ನು ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಿಜಯ್‌ ಜಿ ಅರಳಿ ವಹಿಸಿದ್ದರು, ಮುಖ್ಯ ಅಭ್ಯಾಗತರಾಗಿ ಬೆಳ್ತಂಗಡಿ ತಾಲೂಕು ಶಿಕ್ಷಣ ಸಮನ್ವಯ ಅಧಿಕಾರಿ ಶಂಭು ಶಂಕರ್, ಪ್ರಾಥಮಿಕ ವಿಭಾಗದ ಶಿಕ್ಷಣ ಸಂಯೋಜಕ ಸುಭಾಷ್ ಜಾದವ್‌, ಪ್ರೌಢಶಾಲಾ ವಿಭಾಗದ ಶಿಕ್ಷಣ ಸಂಯೋಜಕಿ ಚೇತನಾಕ್ಷಿ, ಬೆಳ್ತಂಗಡಿ ಸಮೂಹ ಸಂಪನ್ಮೂಲ ವ್ಯಕ್ತಿ ಮೋಹನ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಳ್ತಂಗಡಿ ತಾಲೂಕು ಘಟಕದ ಪದಾಧಿಕಾರಿಗಳಾದ ಶ್ರೀಮತಿ ಐರಿನ್ ಡೇಸಾ, ಉಜಿರೆ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಪ್ರತಿಮಾ ವೆಂಕಟೇಶ್, ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ನಾಯ್ಕ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶ್ರೀಮತಿ ಅನುಷಾ ಇವರು ಕಾರ್ಯಕ್ರಮ ನಿರೂಪಿಸಿದರು  ಪವನ್ ಕುಮಾರ್ ಸ್ವಾಗತಿಸಿದರು. ಶ್ರೀಮತಿ ಗೀತ ಧನ್ಯವಾದ ಸಮರ್ಪಿಸಿದರು.

ಉದ್ಘಾಟನಾ ಕಾರ್ಯಕ್ರಮದ ನಂತರ ಮಧ್ಯಾಹ್ನದ ವರೆಗೆ ಕಿರಿಯ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಸುಮಾರು 13 ಸ್ಪರ್ಧೆಗಳು ನಡೆದವು ಕ್ಲಸ್ಟರ್ ನ 14 ಶಾಲೆಗಳಿಂದ ಸುಮಾರು 250 ಜನ ಸ್ಪರ್ಧಾಳುಗಳು ಮತ್ತು ಸುಮಾರು 50 ಜನ ಮಾರ್ಗದರ್ಶಿ ಶಿಕ್ಷಕರು ಭಾಗವಹಿಸಿದ್ದರು.ಬೆಳ್ತಂಗಡಿ ತಾಲೂಕಿನ ವಿವಿಧ ಕ್ಲಸ್ಟರ್ ಗಳಿಂದ ಆಗಮಿಸಿದ 30 ಜನ ತೀರ್ಪುಗಾರರು ಮತ್ತು ಕೊಠಡಿ ನಿರ್ವಾಹಕರು ಸ್ಪರ್ಧೆಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here