ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಶ್ರೀ ಧರ್ಮಸ್ಥಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಇಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.
11 ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿಕೊಂಡು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾರೆ. 4 ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನಗಳನ್ನು ಪಡೆದರೆ, ಎರಡು ಸ್ಪರ್ಧೆಗಳಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.
ಇವರಿಗೆ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾ ಲಕ್ಷ್ಮೀ ನಾಯಕ್ ಹಾಗೂ ಶಾಲಾ ಶಿಕ್ಷಕರು ಮಾರ್ಗದರ್ಶನವನ್ನು ನೀಡಿರುತ್ತಾರೆ.