ಬೆಳ್ತಂಗಡಿ: ತಾಲೂಕು ಮಟ್ಟದ ಬಾಲಕ- ಬಾಲಕಿಯರ ಹ್ಯಾಂಡ್ ಬಾಲ್ ಪಂದ್ಯಾಟ

0

ಬೆಳ್ತಂಗಡಿ: ತಾಲೂಕು ಮಟ್ಟದ ಬಾಲಕ- ಬಾಲಕಿಯರ ಹ್ಯಾಂಡ್ ಬಾಲ್ ಪಂದ್ಯಾಟ ಸಂತ  ತೆರೇಸಾ ಪ್ರೌಢ ಶಾಲೆ ಬೆಳ್ತಂಗಡಿಯ ಕ್ರಿಡಾಂಗಣದಲ್ಲಿ ಸೆ. 05ರಂದು  ನಡೆಯಿತು.

ಪ್ರೌಢ ಶಾಲಾ ಬಾಲಕರ ವಿಭಾಗದಲ್ಲಿ  ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ   ಪ್ರಥಮ  ಸ್ಥಾನ  ಸಂತ ತೆರೇಸಾ ಶಾಲೆ ಬೆಳ್ತಂಗಡಿ ಮತ್ತು ದ್ವಿತೀಯ ಸ್ಥಾನ ಹೋಲಿ ರೆಡೀಮರ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಬೆಳ್ತಂಗಡಿ. ಬಾಲಕಿಯರ ವಿಭಾಗದಲ್ಲಿ ಹೋಲಿ ರೆಡೀಮರ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಬೆಳ್ತಂಗಡಿ ಮತ್ತು ದ್ವಿತೀಯ ಸ್ಥಾನ ಸಂತ ತೆರೇಸಾ ಪ್ರೌಢ ಶಾಲೆ ಬೆಳ್ತಂಗಡಿ, ಪ್ರಾಥಮಿಕ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸಂತ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ , ದ್ವಿತೀಯ ಸ್ಥಾನ ಹೋಲಿ ರೆಡೀಮರ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಬೆಳ್ತಂಗಡಿ ಪಡೆದುಕೊಂಡಿದೆ.

ಈ ಸಂದರ್ಭದಲ್ಲಿ   ಶಾಲಾ ಮುಖ್ಯೋಪಾಧ್ಯಾಯಿನಿ ವಂ. ಭಗಿನಿ ಲೀನಾಸೋಜ ರವರು ಸರ್ವರನ್ನು ಸ್ವಾಗತಿಸಿದರು. ಅಮೃತ್ ಲಾಲ್ ಪ್ರೌಢ ಶಾಲೆ ಕೆಲರಾಯ್ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ್ ಲೋಬೋ ರವರು ಉದ್ಘಾಟಿಸಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ  ವಂ. ಭಗಿನಿ ಜೆಸಿಂತಾ ಬಾರೆಟ್ಟೋರವರು ಸರ್ವ ಕ್ರೀಡಾ ಪಟುಗಳಿಗೆ ಶುಭ ಕೋರಿದರು. ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಶ್ರೀ ನಾರಾಯಣ ಶೆಟ್ಟಿ ಮುಖ್ಯ ಅತಿಥಿಯಾಗಿ ಹಾಗೂ ಶಾಲಾ ದೈಹಿಕ ಶಿಕ್ಷಕರಾದ ಶ್ರೀ ವಿನ್ಸೆಂಟ್ ಸಿಕ್ವೇರಾರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸೈಂಟ್ ಮೇರಿಸ್ ಶಾಲಾ ದೈಹಿಕ ಶಿಕ್ಷಕರಾದ ಶ್ರೀ ಅಜಿತ್ , ಹೋಲಿ ರೆಡೀಮರ್ ಶಾಲಾ  ದೈಹಿಕ ಶಿಕ್ಷಕರಾದ ಶ್ರೀ ಶರತ್ ರವರು ಉಪಸ್ಥಿತರಿದ್ದರು. ಶಿಕ್ಷಕಿ ಉಮಾ ರವರು ಕಾರ್ಯಕ್ರಮವನ್ನು  ನಿರೂಪಿಸಿದರು. ಶಿಕ್ಷಕಿ ಭವ್ಯ  ಸರ್ವರನ್ನು ವಂದಿಸಿದರು.

LEAVE A REPLY

Please enter your comment!
Please enter your name here