ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

0

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸೆ. 7 ರಂದು ಆಚರಿಸಲಾಯಿತು.‌

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಬೆಳ್ತಂಗಡಿ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ವಾರಿಜಾರವರು ಶಿಕ್ಷಕರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ಸ್ಪರ್ಧೆಗಳಲ್ಲಿ ವಿಜೇತರಾದ ಶಿಕ್ಷಕರಿಗೆ ಬಹುಮಾನವನ್ನು ವಿತರಿಸಿ, ಶಿಕ್ಷಕ ವೃತ್ತಿಯು ಶ್ರೇಷ್ಠ ಹಾಗೂ ಜವಾಬ್ದಾರಿಯುತವಾಗಿದೆ. ಗುರು ಶಿಷ್ಯರ ನಡುವಿನ ಸಂಬಂಧವನ್ನು ಕಥೆಯ ಮೂಲಕ ಮನದಟ್ಟು ಮಾಡಿದರು. ಕಾರ್ಯಕ್ರಮದ ಅಧ್ಯಕ್ಷರಾದ ಶಾಲಾ ಸಂಚಾಲಕರು ಅತೀ ವಂ. ಫಾ. ಜೋಸೆಫ್ ಕಾರ್ಡೋಜರವರು ಮುಗ್ಧ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರಿಗೆ ಭಗವಂತನು ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿ ಆಶೀರ್ವದಿಸಿದರು. ಸಹಶಿಕ್ಷಕಿ ಶ್ರೀಮತಿ ಪ್ರೀತ ಡಿಸೋಜ ಶಿಕ್ಷಕರ ದಿನಾಚರಣೆಯ ಕುರಿತು ಮಾತನಾಡಿದರು.‌ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲಾ ಮಟ್ಟದಲ್ಲಿ ಏರ್ಪಡಿಸಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ಬಹುಮಾನವನ್ನು ವಿತರಿಸಿದರು. ಶಾಲಾ ಸಂಚಾಲಕರು ಶಿಕ್ಷಕರಿಗೆ ಉಡುಗೊರೆಯನ್ನು ನೀಡಿದರು. ವಿದ್ಯಾರ್ಥಿಗಳು ಮನರಂಜನಾ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.‌

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾ ಬೊನವೆಂಚರ್ ಪಿಂಟೋ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ನಿಜ ಮತ್ತು ರೀಶೆಲ್ ಬೆನ್ನಿಸ್ ಕಾರ್ಯಕ್ರಮ ನಿರೂಪಿಸಿದರು. ಸಾನ್ವಿ ಕೆ ಎಲ್ ವಂದಿಸಿದರು.

LEAVE A REPLY

Please enter your comment!
Please enter your name here