ಸೆ.16: ಉಜಿರೆ ಪಿ.ಸಿ.ಪೈ & ಕೋ ಪೆಟ್ರೋಲ್ ಪಂಪ್ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

0

ಬೆಳ್ತಂಗಡಿ: ಪಿ.ಸಿ.ಪೈ & ಕೋ ಉಜಿರೆ ಹಾಗೂ ರೋಟರಿ ಕ್ಲಬ್ ಪುತ್ತೂರು ಇವರ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ವಾಹನ ಚಾಲಕರ ದಿನಾಚರಣೆಯ ಪ್ರಯುಕ್ತ ಸೆ.16ರಂದು ಉಜಿರೆಯ ಪಿ.ಸಿ.ಪೈ & ಕೋ ಪೆಟ್ರೋಲ್ ಪಂಪ್ ನ ಆವರಣದಲ್ಲಿ ಮಂಗಳೂರಿನ ಅತ್ತಾವರದಲ್ಲಿರುವ ಕೆ.ಎಂ.ಸಿ. ಆಸ್ಪತ್ರೆಯ ವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.

ಈ ಶಿಬಿರದಲ್ಲಿ ಸಾಮಾನ್ಯ ರೋಗ ತಪಾಸಣಾ ತಜ್ಞರು, ಕಣ್ಣಿನ ತಜ್ಞರು, ಎಲುಬು ತಜ್ಞರು ಭಾಗವಹಿಸಲಿದ್ದಾರೆ. ಎಲ್ಲಾ ವಾಹನ ಚಾಲಕರು ಹಾಗೂ ನಿರ್ವಾಹಕರು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8105923901 ಯನ್ನು ಸಂಪರ್ಕಿಸುವಂತೆ ಸಂಘಟಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here