ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕಲ್ಮಂಜ ಸರಕಾರಿ ಪ್ರೌಢಶಾಲೆ ವಿಭಾಗಮಟ್ಟಕ್ಕೆ ಆಯ್ಕೆ

0

ಕಲ್ಮಂಜ:  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಇತ್ತೀಚೆಗೆ ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ದಡ್ಡಲಕಾಡು ಇಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಕಲ್ಮಂಜ ಇಲ್ಲಿಯ ಮೂವರು ವಿದ್ಯಾರ್ಥಿಗಳು ವಿಜೇತರಾಗಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

17ನೇ ವಯೋಮಾನದ ಹುಡುಗಿಯರ ವಿಭಾಗದಲ್ಲಿ 9ನೇ ತರಗತಿಯ ಐಶ್ವರ್ಯ ಪ್ರಥಮಸ್ಥಾನˌ17ನೇ ವಯೋಮಾನದ ಹುಡುಗರ ವಿಭಾಗದಲ್ಲಿ 9ನೇ ತರಗತಿಯ ಸುಕೇಶ್ ತೃತೀಯ ಸ್ಥಾನ, 14 ವಯೋಮಾನದ ಹುಡುಗಿಯರ ವಿಭಾಗದಲ್ಲಿ 8ನೇ ತರಗತಿಯ ರಕ್ಷಾ ದ್ವಿತೀಯ ಸ್ಥಾನ ಪಡೆದು ವಿಭಾಗ ಮಟ್ಟದಲ್ಲಿ ಸ್ಪರ್ಧಿಸಲು ಅರ್ಹತೆ ಪಡೆದಿದ್ದಾರೆ. ಅಲ್ಲದೆ 14 ವಯೋಮಾನದ ಹುಡುಗಿಯರ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕು ಚಾಂಪಿಯನ್ ಶಿಪ್ ಗಳಿಸಿದೆ. ಇವರಿಗೆ ಆಂಗ್ಲಭಾಷಾ ಶಿಕ್ಷಕಿ ಪ್ರೇಮಲತಾ ತರಬೇತಿ ನೀಡಿದ್ದು ಬದುಕು ಕಟ್ಟೋಣ ತಂಡದ ಸಂಚಾಲಕ ಮೋಹನ್ ಕುಮಾರ್ ಪ್ರೋತ್ಸಾಹ ನೀಡಿದ್ದರು. ಮಂಜುನಾಥ ಶೆಟ್ಟಿಯವರು ಮಾರ್ಗದರ್ಶನ ನೀಡಿದರು.

LEAVE A REPLY

Please enter your comment!
Please enter your name here