ಮರೋಡಿ ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ನೈರ್ಮಲ್ಯ ಯೋಜನೆಯ ಕಾರ್ಯಕ್ರಮ

0

ಮರೋಡಿ:   ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಪನ್ಮೂಲ ಸಂಸ್ಥೆ ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ” ಸ್ವಚ್ಚ ಭಾರತ್ ಮಿಷನ್ ” ಯೋಜನೆ ಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ನೈರ್ಮಲ್ಯ ಯೋಜನೆಯ ಕಾರ್ಯಕ್ರಮ ಸೆ.9ರಂದು ಜರುಗಿತು.

ಕಾರ್ಯಕ್ರಮದಲ್ಲಿ ಸಹಾಯಕ ಕಾರ್ಯನಿರ್ವಹಣಾ ಅಭಿಯಂತರರಾದ ನಿತಿನ್ ಕುಮಾರ್, ಮರೋಡಿ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಪದ್ಮಶ್ರೀ, ಪಂಚಾಯತ್ ನ ಉಪಾಧ್ಯಕ್ಷರಾದ ಯಶೋಧರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ  ವಾಸುದೇವ ಕೆ.ಜಿ, ಮತ್ತು ಅನುಷ್ಟಾನ ಬೆಂಬಲ ಸಂಪನ್ಮೂಲ ಸಂಸ್ಥೆ ಯ ಸಿಬ್ಬಂದಿ ವಿಶಾಲಾಕ್ಷಿರವರು ಗ್ರಾಮ ನೈರ್ಮಲ್ಯ ಯೋಜನೆಯಲ್ಲಿ ಜನರ ಸಹಭಾಗಿತ್ವ ದ ಬಗ್ಗೆ ಚರ್ಚೆ ಮಾಡಿಸಿದರು.

ಪಂಚಾಯತ್ ಸದಸ್ಯರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾವಿನಕಟ್ಟೆ ಶಿಕ್ಷಕರು ಮತ್ತು ವಿದ್ಯಾರ್ಥಿಯರು, ಪಂಚಾಯತ್ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here