ಬೆಳ್ತಂಗಡಿ ಬಿಲ್ಲವ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 168 ನೇ ಜಯಂತಿ

0

ಬೆಳ್ತಂಗಡಿ :ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ ಮತ್ತು ಬಿಲ್ಲವ ಮಹಿಳಾ ವೇದಿಕೆ, ಇವುಗಳ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಗುರುಜಯಂತಿ ಸೆ.10 ರಂದು ಶ್ರೀ ಗುರು ನಾರಾಯಣ ಸಂಕೀರ್ಣದ ಆಶಾ ಸಾಲಿಯಾನ್ ಕಲ್ಯಾಣ ಮಂಟಪದಲ್ಲಿ ನಡೆಯಿತು.

ಬೆಳಿಗ್ಗೆ ಗುರು ಪೂಜೆ ನಡೆದ ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ನಿವೃತ್ತ ಯೋಧರಿಗೆ ಗೌರವಾರ್ಪಣೆ, ಸಮಾಜದ ಗ್ರಾಮ ಪಂಚಾಯತ್ ಸದಸ್ಯರಿಗೆ ಅಭಿನಂದನೆ ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿವೇತನ ವಿತರಣೆ ನಡೆಯಿತು.

ಮಾಜಿ ಶಾಸಕ ಸಂಘದ ಗೌರವ ಅಧ್ಯಕ್ಷ  ಕೆ. ವಸಂತ ಬಂಗೇರ ಕಾರ್ಯಕ್ರಮ ಉದ್ಘಾಟಸಿದರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ  ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ ಭಾಗವಹಿಸಿ ದ್ದರು.ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯ ಅಧ್ಯಕ್ಷ
ಸತ್ಯಜಿತ್ ಸುರತ್ಕಲ್ ಪ್ರಧಾನ ಭಾಷಣಗಾರರಾಗಿ ಭಾಗವಹಿಸಿ ನಾರಾಯಣ ಗುರುಗಳ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಯುವ ವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಪ್ರಕಾಶಗೊಂಡ ಬ್ರಹ್ಮ ಶ್ರೀ ನಾರಾಯಣ ಗುರು ಜೀವನ ಚರಿತ್ರೆ ಪುಸ್ತಕ ವನ್ನು ಶ್ರೀ ಗುರುದೇವ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಮಾನಿಂಜಾ ಬಿಡುಗಡೆಗೊಳಿಸಿದರು . ಸಂಘದ ಪ್ರಧಾನ ಕಾರ್ಯದರ್ಶಿ ಜಯವಿಕ್ರಮ ಕಲ್ಲಾಪು, ಕೋಶಾಧಿಕಾರಿ ಅಭಿನಂದನ್ ಹರೀಶ್ ಕುಮಾರ್, ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಸುಜಿತಾ ವಿ. ಬಂಗೇರ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ನಿತೀಶ್ ಎಚ್. ಕೋಟ್ಯಾನ್, ಶ್ರೀ ಗುರುದೇವ ಪದವಿ ಕಾಲೇಜು ಪ್ರಾಂಶುಪಾಲೆ ಡಾ. ಸವಿತಾ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಘದ ಮಾಜಿ ಅಧ್ಯಕ್ಷರುಗಳು, ನಿರ್ದೇಶಕರುಗಳು, ಗ್ರಾಮ ಸಮಿತಿಗಳ ಅಧ್ಯಕ್ಷರುಗಳು, ಸಮಾಜ ಭಾಂಧವರು ಹಾಜರಿದ್ದರು

LEAVE A REPLY

Please enter your comment!
Please enter your name here