ಬೆಳ್ತಂಗಡಿ: 2022-23ನೇ ಸಾಲಿನ ಜಿಲ್ಲಾ ಶೈಕ್ಷಣಿಕ ಸಮ್ಮೇಳನ, ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಕಾರ್ಯಕ್ರಮ

0

ಬೆಳ್ತಂಗಡಿ: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಬೆಂಗಳೂರು ದ.ಕ ಜಿಲ್ಲಾ ಘಟಕ ಇದರ 2022-23ನೇ ಸಾಲಿನ ಜಿಲ್ಲಾ ಶೈಕ್ಷಣಿಕ ಸಮ್ಮೇಳನ, ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಕಾರ್ಯಕ್ರಮ ಸೆ.10ರಂದು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನ ಬೆಳ್ತಂಗಡಿಯಲ್ಲಿ ಜರುಗಿತು.

ಬೆಳ್ತಂಗಡಿ  ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಅಧ್ಯಕ್ಷತೆಯನ್ನು ವಹಿಸಿ , ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್, ಪ್ರತಾಪ್ ಸಿಂಹ ನಾಯಕ್ , ಮಂಗಳೂರು ಸಾಕ್ಷರತಾ ಇಲಾಖೆ ಮತ್ತು ಶಾಲಾ ಶಿಕ್ಷಣ ಉಪನಿರ್ದೇಶಕರು ಸುಧಾಕರ ಕೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಡಯಟ್ ಮಂಗಳೂರು ಉಪನಿರ್ದೇಶಕರು ರಾಜಲಕ್ಷ್ಮೀ ಕೆ, ಬೆಳ್ತಂಗಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಹೆಚ್ ಎಸ್, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಬೆಂಗಳೂರು ರಾಜ್ಯಾಧ್ಯಕ್ಷ ಸಿದ್ಧಬಸಪ್ಪ ಬಿ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ದ.ಕ.ಜಿಲ್ಲಾ ಘಟಕದ ಕಾರ್ಯದರ್ಶಿ ಮಾರ್ಕ್ ಮೆಂಡೋನ್ಸಾ ಮತ್ತು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ದ.ಕ.ಜಿಲ್ಲಾ ಘಟಕದ ಅಧ್ಯಕ್ಷರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here