ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ಓಣಂ ಹಾಗೂ ಮೋಂತಿ ಹಬ್ಬ ಆಚರಣೆ

0

ಗಂಡಿಬಾಗಿಲು: ಸಿಯೋನ್ ಆಶ್ರಮ ಗಂಡಿಬಾಗಿಲುವಿನಲ್ಲಿ ಸೆ.8ರಂದು ಓಣಂ ಹಬ್ಬ ಹಾಗೂ ಮೋಂತಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯ ವ್ಯಕ್ತಿಗಳು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಗಂಡಿಬಾಗಿಲಿನ ಚರ್ಚ್ ಧರ್ಮಗುರುಗಳಾದ ರೆ.ಫಾ.ಶಾಜಿ ವೆಟ್ಟಂತಡತ್ತಿಲ್ ರವರು ಆಶೀರ್ವದಿಸಿದರು. ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿಯವರಾದ ಯು.ಸಿ ಪೌಲೋಸ್ ರವರು ಓಣಂ ಹಬ್ಬದ ಮಹತ್ವವನ್ನು ತಿಳಿಸಿ ಶುಭ ಹಾರೈಸಿದರು.

ಈ ಹಬ್ಬಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರು ಹಾಗೂ ಸೇವಾನಿರತರು, ನೆರಿಯ ಗ್ರಾಮ ಪಂಚಾಯತ್ ಸದಸ್ಯರುಗಳು, ಊರಿನ ಹಾಗೂ ನೆರೆಕರೆಯ ಗ್ರಾಮಸ್ಥರು, ಶೌರ್ಯ ವಿಪತ್ತು ನಿರ್ವಹಣಾ ಘಟಕದವರು ಸೇರಿದಂತೆ ಇತರ ಸಂಘ ಸಂಸ್ಥೆಯವರು, ಸಿಯೋನ್ ಸಂಸ್ಥೆಯ ಎಲ್ಲಾ ಟ್ರಸ್ಟೀ ಸದಸ್ಯರುಗಳು, ಕುಟುಂಬಸ್ಥರು, ಸಿಬ್ಬಂದಿವರ್ಗದವರು, ಆಶ್ರಮವಾಸಿಗಳು ಉಪಸ್ಥಿತರಿದ್ದರು.

ಸಾಂತ್ವನ ಕುವೈಟ್ ಹಾಗೂ ಕೆಸಿಡಬ್ಯುಎ ಕುವೈಟ್ ಇವರ ವತಿಯಿಂದ ಮಧ್ಯಾಹ್ನದ ಭೋಜನ ವ್ಯವಸ್ಥೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here