ದ.ಕ ಜಿಲ್ಲೆಯಲ್ಲಿ ಸೆ.26ರಿಂದ ಅ.10 ರವರೆಗೆ ಶಾಲೆಗಳಿಗೆ ದಸರಾ ರಜೆ ಘೋಷಣೆ

0

ಬೆಳ್ತಂಗಡಿ: ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 26ರಿಂದ ಅಕ್ಟೋಬರ್ ಹತ್ತರವರೆಗೆ ಶಾಲೆಗಳಿಗೆ ದಸರಾ ರಜೆ ನೀಡಲಾಗುತ್ತಿದೆ. ಅಕ್ಟೋಬರ್ 2ರಂದು ಗಾಂಧಿ ಜಯಂತಿ ಆಚರಣೆಯ ಶರತ್ತಿನ ಮೇರೆಗೆ ರಜೆ ಮಂಜೂರು ಮಾಡಲು ದಕ್ಷಿಣ ಕನ್ನಡ ಡಿಸಿಗೆ ಸೂಚಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಚಿವ ಬಿಸಿ ನಾಗೇಶ್ ನಿರ್ದೇಶನ ನೀಡಿದ್ದಾರೆ.

ನವರಾತ್ರಿ ಹಬ್ಬಕ್ಕೆ ಪೂರಕವಾಗುವಂತೆ ದಸರಾ ರಜೆ ಮಂಜೂರು ಮಾಡುವಂತೆ ಶಿಕ್ಷಣ ಸಚಿವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಈ ಆದೇಶ ಮಾಡಲಾಗಿದೆ.

LEAVE A REPLY

Please enter your comment!
Please enter your name here