ಬೆಳ್ತಂಗಡಿ: ಕಾನೂನು ಅರಿವು ಕಾರ್ಯಕ್ರಮ ಹಾಗೂ ಪೋಷಣ್ ಮಾಸಾಚರಣೆ ಕಾರ್ಯಕ್ರಮ

0

ಬೆಳ್ತಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ಹಾಗೂ ಪೋಷಣ್ ಮಾಸಾಚರಣೆ ಕಾರ್ಯಕ್ರಮವು ಬೆಳ್ತಂಗಡಿ ಸಿ.ಡಿ.ಪಿ.ಒ ಕಚೇರಿಯಲ್ಲಿ ಸೆ.13ರಂದು ಜರುಗಿತು.

ಕಾರ್ಯಕ್ರಮವನ್ನು ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಬೆಳ್ತಂಗಡಿ ತಾ.ಕಾ.ಸೇ.ಸ ಸದಸ್ಯ ಕಾರ್ಯದರ್ಶಿ ಸಂದೇಶ ಕೆ ಉದ್ಘಾಟಿಸಿದರು.

ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರೀಯಾ ಆಗ್ನೆಸ್ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯೇಂದ್ರ ಟಿ.ಹೆಚ್, ಬೆಳ್ತಂಗಡಿ ವಕೀಲರ ಸಂಘ ದ ಅಧ್ಯಕ್ಷ ಪ್ರಸಾದ್ ಕೆ.ಎನ್, ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶೈಲೇಶ್ ಆರ್ ಠೋಸರ್, ಬೆಳ್ತಂಗಡಿ ಸಹಾಯಕ ಸರ್ಕಾರಿ ಅಭಿಯೋಜಕರು ದಿವ್ಯ ರಾಜ್ ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ  ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ  ಬೆಳ್ತಂಗಡಿ ವಕೀಲರು ಆರ್ ಶುಭಾಷಿಣಿ ಇವರು  ಪೌಷ್ಠಿಕಾಂಶ ದಿನದ ಕುರಿತು ವಿವರಿಸಿದರು.

LEAVE A REPLY

Please enter your comment!
Please enter your name here