ಹೊಸ೦ಗಡಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ವೀಡಿಯೋ ಇರುವುದಾಗಿ ಬಾಲಕಿಗೆ ಬೆದರಿಕೆ : ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

0

ವೇಣೂರು: ಅಪ್ರಾಪ್ತೆಯ ಮೇಲೆ  ಪರಿಚಿತ ಯುವಕನೋರ್ವ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಹೊಸಂಗಡಿಯಲ್ಲಿ ನಡೆದಿದೆ.

ಬಾಲಕಿ  ಗರ್ಭಿಣಿ ಯಾಗಿರುವ ಬಗ್ಗೆ  ವೇಣೂರು ಪೊಲೀಸರಿಗೆ ದೂರು ನೀಡಿದ್ದಾಳೆ.

ಆರೋಪಿ ವೀಡಿಯೋ ಇರುವುದಾಗಿ ಬಾಲಕಿಗೆ ಬೆದರಿಕೆ ಹಾಕಿ ಆಕೆಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬಾಲಕಿಯ ದೂರಿನಂತೆ ಸ್ಥಳೀಯ ನಿವಾಸಿ ಅರವಿಂದ್( 24) ಎಂಬಾತನ ವಿರುದ್ದ ವೇಣೂರು ಠಾಣೆಯಲ್ಲಿ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಹಿಂದೆಯೂ ವೇಣೂರು ಠಾಣಾ ವ್ಯಾಪ್ತಿಯಲ್ಲಿ ಇಂತಹ ಪ್ರಕರಣಗಳು ದಾಖಲಾಗಿತ್ತು.

LEAVE A REPLY

Please enter your comment!
Please enter your name here