ಶ್ರೀ ಧ.ಮಂ.ಭಜನಾ ಪರಿಷತ್ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಭಜನಾ ತರಬೇತಿ ಕಮ್ಮಟ ಕಾರ್ಯಾಗಾರ

0

ಧರ್ಮಸ್ಥಳ: ಶ್ರೀ ಧ.ಮಂ.ಭಜನಾ ಪರಿಷತ್ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ 24ನೇ ವಷ೯ದ ಭಜನಾ ತರಬೇತಿ ಕಮ್ಮಟ ಕಾರ್ಯಾಗಾರ ಸೆ.16ರಂದು ಶ್ರೀ.ಕ್ಷೇ.ಧ ಅಮೃತವರ್ಷಿಣಿ ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು   ದೀಪ ಪ್ರಜ್ವಲಿಸುವ ಮೂಲಕ ಸಂಗೀತ ನಿರ್ದೇಶಕಿ, ಪ್ರಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕಿ ಡಾ. ಶಮಿತ ಮಲ್ನಾಡ್ ನೆರವೇರಿಸಿದರು.

ಅಧ್ಯಕ್ಷತೆಯನ್ನು ಶ್ರೀ.ಕ್ಷೇ.ಧ.ಧರ್ಮಾಧಿಕಾರಿಗಳಾದ ಪೂಜ್ಯ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ವಹಿಸಿದ್ದರು.

ವೇದಿಕೆಯಲ್ಲಿ ಶ್ರೀ ಧಾಮ ಮಾಣಿಲದ ಸೇವಾ ಪ್ರತಿಷ್ಟಾನದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಶ್ರೀ.ಧ.ಮಂ.ಭಜನಾ ಪರಿಷತ್ ಉಪಾಧ್ಯಕ್ಷೆ ಡಾ|| ಹೇಮಾವತಿ ವೀ.ಹೆಗ್ಗಡೆಯವರು ಉಪಸ್ಥಿತರಿದ್ದು ಶುಭ ಸಂದೇಶವನ್ನು ಹೇಳಿದರು.

ಭಜನಾ ಕಮ್ಮಟ ಕಾರ್ಯದರ್ಶಿ ಸುರೇಶ್ ಮೊಯ್ಲಿ ವರದಿ ವಾಚಿಸಿದರು. ಪುರುಷ ಹಾಗೂ ಮಹಿಳಾ ಶಿಬಿರಾರ್ಥಿಗಳು ಭಜನಾ ಕಿಟ್ ನೀಡಿ ಕಮ್ಮಟಕ್ಕೆ ಚಾಲನೆ ನೀಡಲಾಯಿತು.

ವಿದುಷಿ ಕು.ಚೈತ್ರಾ. ಧರ್ಮಸ್ಥಳ ಮತ್ತು ತಂಡದವರಿಂದ ನೃತ್ಯ ರೂಪಕದ ಮೂಲಕ ಪ್ರಾರ್ಥನೆಯನ್ನು ಮಾಡಿದರು. ಭಜನಾ ಕಮ್ಮಟದ ಸಂಚಾಲಕರು ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿ ಪ್ರಾಸ್ತಾವಿಕ ನುಡಿಯನ್ನಾಡಿದರು. ಯೋಜನಾಧಿಕಾರಿಗಳಾದ ಚಂದ್ರಶೇಖರ್ ಹಾಗೂ ಜಯಂತಿ ಕಾರ್ಯಕ್ರಮ ನಿರೂಪಿಸಿದರು.ಭಜನಾ ಪರಿಷತ್ ಕಾರ್ಯದರ್ಶಿ ಪುರುಷೋತ್ತಮ ಪಿ.ಕೆ ಧನ್ಯವಾದಗೈದರು.

 

LEAVE A REPLY

Please enter your comment!
Please enter your name here