ಧರ್ಮಸ್ಥಳ ಗ್ರಾಮದ ನಾರ್ಯ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ

0

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ನಾರ್ಯ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮವು ಸೆ.9ರಂದು ಶ್ರೀ ಸಿದ್ದಿವಿನಾಯಕ ಸ್ತ್ರೀ ಶಕ್ತಿ ಸಂಘ ವತಿಯಿಂದ ಸಂಘದ ಅಧ್ಯಕ್ಷೆ ಗ್ರಾ.ಪಂ ಸದಸ್ಯೆ ರೇವತಿಯವರ ಅಧ್ಯಕ್ಷತೆಯಲ್ಲಿ ಜರುಗಿತು.

ಮುಖ್ಯ ಅತಿಥಿಯಾಗಿ ಧರ್ಮಸ್ಥಳದ ಸಮುದಾಯ ಆರೋಗ್ಯ ಅಧಿಕಾರಿ ಆನ್ಸಿಮೇರಿ ಭಾಗವಹಿಸಿ ಆರೋಗ್ಯದ ಬಗ್ಗೆ ಪೌಷ್ಠಿಕ ಆಹಾರಗಳಾದ ಸೊಪ್ಪು ತರಕಾರಿ ಹಣ್ಣುಗಳನ್ನು ಬಳಸುವ ಬಗ್ಗೆ ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಅಂಗನವಾಡಿ ಹಳೆ ವಿದ್ಯಾರ್ಥಿನಿ ಅತೀ ಚಿಕ್ಕ ವಯಸ್ಸಿನಲ್ಲಿಯೇ ಡಾಕ್ಟರೇಟ್ ಗೌರವಕ್ಕೆ ಪಾತ್ರರಾದ ಕು|ಡಾ| ಶೌರ್ಯ  ಎಸ್.ವಿ ಇವರನ್ನು ಸ್ತ್ರೀ ಶಕ್ತಿ ಸಂಘದ ಸದಸ್ಯೆಯರು ತಯಾರಿಸಿದ ಪೌಷ್ಠಿಕ ಆಹಾರ ತರಕಾರಿ ಸೊಪ್ಪು ಹಣ್ಣುಗಳನ್ನು ಪ್ರದರ್ಶಿಸಲಾಯಿತು.

ವೇದಿಕೆಯಲ್ಲಿ ಅಂಗನವಾಡಿ ಸಲಹಾ ಸಮಿತಿ ಅಧ್ಯಕ್ಷೆ ಸುಜಾತ, ಗ್ರಾ.ಪಂ ಸದಸ್ಯೆ ರೇವತಿ, ಆಶಾ ಕಾರ್ಯಕರ್ತೆ ಸರಸ್ವತಿ , ಅಂಗನವಾಡಿ ಕಾರ್ಯಕರ್ತೆ ಜಾನಕಿ, ಸರಸ್ವತಿ, ಸ್ತ್ರೀಶಕ್ತಿ ಗೊಂಚಲು ಕಾರ್ಯದರ್ಶಿ ಸುಗುಣ, ಕಾರ್ಯಕ್ರಮದಲ್ಲಿ ಸ್ತ್ರೀ ಶಕ್ತಿ ಸಂಘದ ಸದಸ್ಯೆಯರು, ಅಂಗನವಾಡಿ ಸಲಹಾ ಸಮಿತಿ ಸದಸ್ಯರು, ಪುಟಾಣಿ ಮಕ್ಕಳು, ಪೋಷಕರು ಉಪಸ್ಥಿತರಿದ್ದರು.

ಪ್ರಾರ್ಥನೆಯೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಜಾನಕಿ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here