ಎಸ್ ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ ದಿನಾಚರಣೆ, ಸರ್ ಎಂ ವಿಶ್ವೇಶ್ವರಯ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ

0

ಉಜಿರೆ: ಎಸ್ ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಇಂಜಿನಿಯರ್ ದಿನಾಚರಣೆ’ ಯಂದು ಕಾಲೇಜಿನ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಇಲೆಕ್ಟ್ರಿಕಲ್ ವಿಭಾಗ ಮುಖ್ಯಸ್ಥ ಡಾ. ಮಂಜುನಾಥ್ ಮಾತನಾಡುತ್ತಾ ಅಣೆಕಟ್ಟುಗಳು, ಸೇತುವೆಗಳು ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣದ ಹಿಂದೆ ಇಂಜಿನಿಯರಗಳ ಶ್ರಮ ಅಪಾರ, ಅವರು ತಮ್ಮ ಗಮನಾರ್ಹ ಕಾರ್ಯಗಳಿಂದ ಮತ್ತು ಪ್ರತಿಭೆಯಿಂದ ರಾಷ್ಟ್ರವೇ ಹೆಮ್ಮೆ ಪಡುವಂತೆ ಮಾಡುತ್ತಾರೆ ಎಂಬುದಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಅವರು ಶ್ರೇಷ್ಠ ಉದಾಹರಣೆಯಾಗಿರುವರು. ಇವರ ಆದರ್ಶಗಳನ್ನು ವಿದ್ಯಾರ್ಥಿಗಳು ಪಾಲಿಸಿ ಜೀವನದಲ್ಲಿ ಯಶಸ್ಸು ಕಾಣುವಂತಾಗಲಿ ಎಂದು ಆಶಿಸಿದರು.

ಗ್ರಾಮೀಣ ಪರಿಸರದ ಶಾಲಾ ಮಕ್ಕಳಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ ಕಾಲೇಜಿನ ಪ್ರಾದ್ಯಾಪಕರ ಮತ್ತು ವಿದ್ಯಾಥಿಗಳ ತಂಡವು ಸ್ಥಳೀಯ ಪ್ರೌಢ ಶಾಲೆಗಳಲ್ಲಿ ಕಾರ್ಯಗಾರ ನಡೆಸುವುದಾಗಿ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ತಿಳಿಸಿದರು.

LEAVE A REPLY

Please enter your comment!
Please enter your name here