ನಿಡ್ಲೆ ಗ್ರಾ.ಪಂ ಗ್ರಾಮ ವಾಸ್ತವ್ಯ ಕಾರ್ಯಕ್ರಮ

0

ನಿಡ್ಲೆ: ಕರ್ನಾಟಕ ಸರ್ಕಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಂತೆ ಸೆಪ್ಟೆಂಬರ್ ತಿಂಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಸೆ.17ರಂದು ಕೊಕ್ಕಡ ಹೋಬಳಿಯ ನಿಡ್ಲೆ ಗ್ರಾಮದ ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ದೀಪ ಬೆಳಗಿಸಿ ಉದ್ಘಾಟನೆಯನ್ನು ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಗ್ರಾ.ಪಂ ಅಧ್ಯಕ್ಷ ಪ್ರವೀಣ್ ಹೆಬ್ಬಾರ್  ವಹಿಸಿದ್ದರು.

ವೇದಿಕೆಯಲ್ಲಿ ನಿಡ್ಲೆ ಗ್ರಾ.ಪಂ ಉಪಾಧ್ಯಕ್ಷೆ ಶ್ಯಾಮಲಾ, ತಾ.ಪಂ   ಮುಖ್ಯಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಎಚ್ ಎಸ್, ಕೃಷಿ ಅಧಿಕಾರಿ ಚಿದಾನಂದ ಹೂಗಾರ್, ಪಶು ಸಂಗೋಪನಾ ಅಧಿಕಾರಿ ಜಯಕೀರ್ತಿ ಜೈನ್,  ಸಿಡಿಪಿಒ ಪ್ರಿಯಾ ಆಗ್ನೇಸ್, ಸಮಾಜ ಕಲ್ಯಾಣ ಇಲಾಖಾ ಅಧಿಕಾರಿ ಹೇಮಲತಾ, ಎ.ಪಿ.ಎಂಸಿ   ಕಾರ್ಯದರ್ಶಿ, ಅರಣ್ಯ ಇಲಾಖೆಯ  ಅರಣ್ಯಾಧಿಕಾರಿ  ಅಶೋಕ್,   ಭೂ ಇಲಾಖೆಗಳ ಸಹಾಯಕ ನಿರ್ದೇಶಕರು,  ಕೊಕ್ಕಡ ನಾಡಕಚೇರಿಯ  ಉಪತಹಶೀಲ್ದಾರ್ ನವ್ಯ, ತಾಲೂಕು ವೈದ್ಯಾಧಿಕಾರಿ ಡಾ| ಪ್ರಕಾಶ್, ಕೃಷಿ ಅಧಿಕಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಂದಾಯ ಅಧಿಕಾರಿಗಳು,  ಸಿಬ್ಬಂದಿಗಳು ಪೊಲೀಸ್ ಇಲಾಖೆ,  ಆಶಾ ಕಾರ್ಯಕರ್ತೆಯರು,  ಅಂಗನವಾಡಿ ಕಾರ್ಯಕರ್ತೆಯರು,  ಗ್ರಾ.ಪಂ ಸದಸ್ಯರು, ಸಿಬ್ಬಂದಿವರ್ಗದವರು, ಶಾಲಾ ಅಧ್ಯಾಪಕರು, ಗ್ರಾ.ಪಂ ಸದಸ್ಯರು ಮತ್ತು ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

 

 

LEAVE A REPLY

Please enter your comment!
Please enter your name here