ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 68ನೇ ವನ್ಯಜೀವಿ ಸಪ್ತಾಹ

0

ಬೆಳ್ತಂಗಡಿ: ಕುದುರೆಮುಖ ವನ್ಯಜೀವಿ ವಿಭಾಗ, ಬೆಳ್ತಂಗಡಿ ವನ್ಯಜೀವಿ ವಲಯ ಹಾಗೂ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಸೆ. 17ರಂದು 68ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು  ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾದ ಬೆಳ್ತಂಗಡಿ ಪ್ರಾಥಮಿಕ ವಿಭಾಗದ ಶಿಕ್ಷಣ ಸಂಯೋಜಕ ಸುಭಾಶ್ ಜಾದವ್ ರವರು ಅರಣ್ಯ ಇಲಾಖೆಯವರು ವನ್ಯ ಸಂಪತ್ತನ್ನು ಉಳಿಸುವ ಜವಾಬ್ದಾರಿಯನ್ನು ಈ ಕಾರ್ಯಕ್ರಮದ ಮೂಲಕ ಇಂದಿನ ಪೀಳಿಗೆಗೆ ವಹಿಸಿರುವರು ಎಂದು ನುಡಿದರು. ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ್ ಭಟ್ ಎಲ್ಲಾ ಸ್ಪರ್ಧೆಗಳ ಸಂಪೂರ್ಣ ಮಾಹಿತಿ ನೀಡಿ ಸಹಕರಿಸಿದರು.

ಹೋಲಿ ರಿಡೀಮರ್ ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ಅರಣ್ಯ ಇಲಾಖೆಯು ವಿದ್ಯಾರ್ಥಿಗಳಲ್ಲಿ ವನ್ಯಜೀವಿಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ನುಡಿದು ಶುಭ ಹಾರೈಸಿದರು. ವನ್ಯಜೀವಿ ವಲಯದ ಉಪ ವಲಯಾಧಿಕಾರಿ ರಂಜಿತ್ ಕುಮಾರ್ ವನ್ಯಜೀವಿ ಸಪ್ತಾಹದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಚಿತ್ರಕಲೆ, ವನ್ಯ ಪ್ರಾಣಿಯನ್ನು ಗುರುತಿಸುವುದು, ರಸಪ್ರಶ್ನೆ, ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳನ್ನು ನಡೆಸಲಾಯಿತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ಶಿಕ್ಷಕರು ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಿದ್ದರು. ವನ್ಯಜೀವಿ ವಲಯದ ಎಲ್ಲ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಹ ಶಿಕ್ಷಕಿಯರಾದ ಶ್ರೀಮತಿ ಎಲ್ವಿಟಾ ಸ್ವಾಗತಿಸಿ, ಶ್ರೀಮತಿ ಅನಿತಾ ನಿರೂಪಿಸಿದರು. ವನ್ಯಜೀವಿ ವಲಯದ ಉಪ ವಲಯಾಧಿಕಾರಿ ಕಿರಣ್ ಪಾಟೀಲ್ ವಂದಿಸಿದರು.

LEAVE A REPLY

Please enter your comment!
Please enter your name here