ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸ್ಕೌಟ್ ಮತ್ತು ಗೈಡ್ ದಳಗಳ ಉದ್ಘಾಟನಾ ಕಾರ್ಯಕ್ರಮ

0

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸೆ.16ರಂದು ಸ್ಕೌಟ್ ಮತ್ತು ಗೈಡ್ ದಳಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಉದ್ಘಾಟನೆಯನ್ನು ಸ್ಕೌಟ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಪ್ರಮೀಳಾ ಇವರು ದೀಪ ಬೆಳಗಿಸಿ ನೆರವೇರಿಸಿ, ಈ ಶಾಲೆಯ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳು ರಾಜ್ಯಮಟ್ಟ ಹಾಗೂ ರಾಷ್ಟ್ರಮಟ್ಟದಲ್ಲಿ ಬೆಳಗಲಿ ಎಂದು ಶುಭ ಹಾರೈಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರು ಲಕ್ಷ್ಮೀನಾರಾಯಣ್ ಕೆ ರವರು ವಹಿಸಿ, ಸ್ಕೌಟ್ ಮತ್ತು ಗೈಡ್ ನಿಯಮ, ಪ್ರತಿಜ್ಞೆಗಳನ್ನು ಅನುಸರಿಸಿ, ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಸಮಾರಂಭದಲ್ಲಿ ವಾಣಿ ಪಿಯು ವಿಭಾಗದ ಉಪನ್ಯಾಸಕರು ಹಾಗೂ ರೋವರ್ ಸ್ಕೌಟ್ ಲೀಡರ್ ಬೆಳಿಯಪ್ಪ ಗೌಡ ಮತ್ತು ವಾಣಿ ಶಾಲಾ ಸಹ ಶಿಕ್ಷಕಿ ಹಾಗೂ ಗೈಡ್ ಕ್ಯಾಪ್ಟನ್ ಶೋಭಾ ನವೀನ್ ರವರು ಉಪಸ್ಥಿತರಿದ್ದರು.

ವಾಣಿ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಹಾಸಿನಿ ಸ್ವಾಗತಿಸಿದರು, ಶಾಲಾ ಸಹ ಶಿಕ್ಷಕಿ ಹಾಗೂ ಗೈಡ್ ಕ್ಯಾಪ್ಟನ್ ಸುಮಲತಾ ಎ ವಂದನಾರ್ಪಣೆ ಗಯದರು. ಗೈಡರ್ ಗಳಾದ ಕು.ನವಮಿ ಮತ್ತು ಕು. ವಂಶಿಕಾ ನಿರೂಪಿಸಿದರು.

LEAVE A REPLY

Please enter your comment!
Please enter your name here