ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ವಿಶ್ವಶಾಂತಿ ದಿನಾಚರಣೆ

0

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆಯು ಸೆ.21 ರಂದು ಬಸ್ ನಿಲ್ದಾಣದಲ್ಲಿ ಆಚರಿಸಲಾಯಿತು.

ವಿಶ್ವಶಾಂತಿಯ ಸಂದೇಶದೊಂದಿಗೆ ಬೀದಿ ನಾಟಕ ಹಾಗೂ ಹಾಡುಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿಯನ್ನು ಸ್ಕೌಟ್ ಗೈಡ್ ವಿದ್ಯಾರ್ಥಿಗಳು ಮೂಡಿಸಿದರು. . ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ರಾಜೇಶ್ ಕೋಟ್ಯಾನ್, ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯನಂದ ಗೌಡ ಹಾಗೂ ಇತರ ಸದಸ್ಯರು, ಪೊಲೀಸ್ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದರು. ಗೈಡ್ ವಿದ್ಯಾರ್ಥಿನಿ ಯಶ್ವಿತಾ ಸ್ವಾಗತಿಸಿ, ಸ್ಕೌಟ್ ವಿದ್ಯಾರ್ಥಿ ರಕ್ಷಣ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಗೈಡ್ ವಿದ್ಯಾರ್ಥಿನಿ ಸಿಂಚನ ವಂದಿಸಿದರು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಸಹಕಾರದೊಂದಿಗೆ , ಶಾಲಾ ಶಿಕ್ಷಕಿಯರಾದ ದೀಕ್ಷಾ ಮೋಹಿನಿ ಹಾಗೂ ಶಾಲಾ ಶಿಕ್ಷಕ ವೃಂದದವರು ಸಹಕರಿಸಿದರು. ಸ್ಥಳೀಯ ಸಂಸ್ಥೆಯ‌ ಕಾರ್ಯದರ್ಶಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮವನ್ನು ಸಂಘಟಿಸಿದರು.

LEAVE A REPLY

Please enter your comment!
Please enter your name here