ಗುರಿಪಳ್ಳ: ಕನ್ಯಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ಪ್ರಶಸ್ತಿ

0

ಗುರಿಪಳ್ಳ: ಕನ್ಯಾಡಿ (ಜಯನಗರ) ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ತಾಲೂಕು ಮಟ್ಟದ ಉತ್ತಮ ಗುಣಮಟ್ಟದ ಸಂಘ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮಂಗಳೂರು ದ.ಕ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ನಡೆದ 36ನೇ ವರ್ಷದ 2021-22 ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷೆ ಅನಿತಾ ಕೊಡೆಕ್ಕಲ್ ಹಾಗೂ ಕಾರ್ಯದರ್ಶಿ ರೇವತಿ ಅವರಿಗೆ ಪ್ರಶಸಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ತಾಲೂಕುವಾರು ಉತ್ತಮ ಕಾರ್ಯದರ್ಶಿ ಪ್ರಶಸ್ತಿಯನ್ನು ಸಂಘದ ಕಾರ್ಯದರ್ಶಿ ರೇವತಿಯವರಿಗೆ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಡದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here