ಬೆಳಾಲು: ರಸ್ತೆ ದಾಟುತ್ತಿದ್ದ ಜಿಂಕಿಯೊಂದಕ್ಕೆ ಡಿಕ್ಕಿಯಾದ ಕಾರು: ಜಿಂಕೆ ಸ್ಥಳದಲ್ಲೇ ಸಾವು

0


ಬೆಳಾಲು : ರಸ್ತೆ ದಾಟುತ್ತಿದ್ದ ಜಿಂಕೆಯೊಂದಕ್ಕೆ ಕಾರು ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿದ ಘಟನೆ ಸೆ.20 ರಂದು  ರಾತ್ರಿ  ಬೆಳಾಲು ಗ್ರಾಮದ ಬೈತಾಡಿ ಎಂಬಲ್ಲಿ ಸಂಭವಿಸಿದೆ.

ಕಕ್ಕಿಂಜೆಯ ಸಿದ್ದಿಕ್ ಎಂಬವರು ಉಪ್ಪಿನಂಗಡಿ ಕಡೆಗೆ ಕಾರನ್ನು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಹಠತ್ತಾನೆ ರಸ್ತೆ ದಾಟಲು ಜಿಗಿದ ಜಿಂಕೆ ಕಾರಿಗೆ ಡಿಕ್ಕಿಯಾಗಿ ಸ್ಥಳದಲ್ಲೇ
ಸಾವನ್ನಪ್ಪಿತ್ತು. ಈ ವಿಚಾರವನ್ನು ಅರಣ್ಯ ಇಲಾಖಾ ಅಧಿಕಾರಿಗಳಿಗೆ ತಿಳಿಸಿದ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಇಲಾಖಾ ಅಧಿಕಾರಿಗಳು ಜಿಂಕೆ ಶವವನ್ನು ವಶಕ್ಕೆ ಪಡೆದು ಇಲಾಖಾ ವಿಧಿ ವಿಧಾನ ನಡೆಸಿ ಮಣ್ಣಗುಂಡಿ ಕಾಡಿನಲ್ಲಿ ಅಂತ್ಯವಿಧಿಯನ್ನು ನೆರವೇರಿಸಿದರು.

ಮೃತ ಜಿಂಕೆ ಸುಮಾರು 3 ವರ್ಷ ಪ್ರಾಯದ ಗಂಡು ಜಿಂಕೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಅರಣ್ಯ ಉಪ ವಿಭಾಗದ ಎ.ಸಿ.ಎಫ್. ಕಾರ್ಯಪ್ಪ, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಮಧುಸೂಧನ್, ಉಪ ಅರಣ್ಯಾಧಿಕಾರಿ ಪ್ರಶಾಂತ್, ಅರಣ್ಯ ರಕ್ಷಕ ವಿನಯ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here