ಬದನಾಜೆ ಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

0

ಉಜಿರೆ : ಮಾಚಾರು ಬದನಾಜೆ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ ನಡೆಯಿತು.

ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು ಕಾರ್ಯಕ್ರಮವನ್ನು ಉದ್ಘಾಟಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಅನಿಲ್ ಡಿಸೋಜಾ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಪ್ರೌಢ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು ಹಳೆ ವಿದ್ಯಾರ್ಥಿ ಸಂಘ ಯುವಕ ಮಂಡಲ ಮತ್ತು ಯುವತಿ ಮಂಡಳಿಯ ಅಧ್ಯಕ್ಷರು, ಉಜಿರೆ ಗ್ರಾಮ ಪಂಚಾಯತ್ ಸದಸ್ಯ ಇಲಿಯಾಸ್ ಬಿ. ಎಂ., ಮಂಜುನಾಥ, ಗುರುಪ್ರಸಾದ್ ಕೋಟ್ಯಾನ್, ಸವಿತಾ,   ನಾಗವೇಣಿ,  ಲಲಿತ, ಎಸ್ ಡಿ ಎಂ ಸಿ ಉಪಾಧ್ಯಕ್ಷ ಜನಾರ್ದನ್ ನಾಯ್ಕ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢಶಾಲಾ ಶಿಕ್ಷಕಿ ಶ್ರೀಮತಿ ಮೇಧಾ ಕಾರ್ಯಕ್ರಮವನ್ನು ನಿರೂಪಿಸಿ ದೈಹಿಕ ಶಿಕ್ಷಣ ಶಿಕ್ಷಕ ಅಖಿಲ್ ಕುಮಾರ್ ವಂದಿಸಿದರು.

ಫಲಿತಾಂಶ:

ಪ್ರಾಥಮಿಕ ವಿಭಾಗದ ಬಾಲಕರಲ್ಲಿ ಬದನಾಜೆ ಹಿ. ಪ್ರಾ. ಶಾಲೆ ಪ್ರಥಮ, ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಹಾಗೂ ಬಾಲಕಿಯರ ವಿಭಾಗದಲ್ಲಿ ಬದನಾಜೆ ಹಿ. ಪ್ರಾ. ಶಾಲೆ ಪ್ರಥಮ, ಉಜಿರೆ ಶ್ರೀ ಧ. ಮ. ಅನುದಾನಿತ ಪ್ರಾಥಮಿಕ ಶಾಲೆ, ದ್ವಿತೀಯ, ಪ್ರೌಢಶಾಲಾ ವಿಭಾಗ ಬಾಲಕಿಯರಲ್ಲಿ ಬದನಾಜೆ ಪ್ರಥಮ ಅನುಗ್ರಹ ದ್ವಿತೀಯ,ಬಾಲಕರ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಕಾಯರ್ತಡ್ಕ ಪ್ರಥಮ, ಉಜಿರೆ ಅನುಗ್ರಹ ದ್ವಿತೀಯ ಬಹುಮಾನ ಪಡೆದುಕೊಂಡರು.

LEAVE A REPLY

Please enter your comment!
Please enter your name here