ಸ್ವಚ್ಛತಾ ಹಿ ಸೇವಾ ಆಂದೋಲನ” ಕಾರ್ಯಕ್ರಮ

0

ಬೆಳ್ತಂಗಡಿ :ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್  ಬೆಳ್ತಂಗಡಿ, ಗ್ರಾಮ ಪಂಚಾಯತ್ ಲಾಯಿಲ ಮತ್ತು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಇದರ ವತಿಯಿಂದ “ಸ್ವಚ್ಛತಾ ಹಿ ಸೇವಾಆಂದೋಲನ” ಕಾರ್ಯಕ್ರಮವು  ಲಾಯಿಲ ರಾಘವೇಂದ್ರ ನಗರ ಸೋಮಾವತಿ ನದಿ ತೀರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ‌ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರೋವರ್ ರೇಂಜರ್ ವಿದ್ಯಾರ್ಥಿ ಗಳು ನದಿಯ ಸುತ್ತ ಮುತ್ತ ಬಿದಿದ್ದ ಕಸಗಳನ್ನೂ ಮತ್ತು ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿದ್ದ ಮರದ ತುಂಡುಗಳನ್ನು ನದಿ ನೀರಿಗೆ ಎಸೆದ ತ್ಯಾಜ್ಯಗಳನ್ನು ತೇರವು ಗೊಳಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅದ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿ,ಕಾರ್ಯದರ್ಶಿ, ಸಿಬ್ಬಂದಿಗಳು ಗ್ರಾಮ ಪಂಚಾಯತ್ ಸ್ವಚ್ಛತಾ ಮುಖ್ಯಸ್ಥೆ,ಮತ್ತು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳ , ವಾಣಿ ಪದವಿ ಪೂರ್ವ ಕಾಲೇಜಿನ ರೇಂಜರ್ ಲೀಡರ್ ಶ್ರೀಮತಿ ರಕ್ಷ ಭಾಗವಹಿಸಿದರು.

LEAVE A REPLY

Please enter your comment!
Please enter your name here