ನಾಳ ನವರಾತ್ರಿ ವಿಶೇಷ ಪೂಜೆ ಹಾಗೂ ಭಜನೋತ್ಸವ ಕಾರ್ಯಕ್ರಮ

0


ನಾಳ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ನವರಾತ್ರಿ ವಿಶೇಷ ಪೂಜೆ ಮತ್ತು ಭಜನೋತ್ಸವ ಕಾರ್ಯಕ್ರಮ ಸೆ.27 ರಂದು ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ಓಡೀಲು ಮಹಾಲಿಂಗೇಶ್ವರ ಭಜನಾ ಮಂಡಳಿ ಸದಸ್ಯರಿಂದ ಭಜನೋತ್ಸವ ಕಾರ್ಯಕ್ರಮ, ರಾತ್ರಿ ಮಹಾ ಪೂಜೆ ಹಾಗೂ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಹಾಗೂ ಭಜನಾ ಸೇವಾ ಕರ್ತರಾದ ನಾಳ ಹೊಸ ಮನೆ ಗುಂಡೂರಾವ್ ಮನೆಯವರಿಂದ ಭಜನಾ ಸೇವೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ, ಅಭಿವೃದ್ಧಿ ಸಮಿತಿ, ಭಜನಾ ಮಂಡಳಿ ಮತ್ತು ಶ್ರೀ ದುರ್ಗಾ ಮಾತೃ ಮಂಡಳಿ ಸಮಿತಿ ಅಧ್ಯಕ್ಷರು,ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here