ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

0

ಪಿಲ್ಯ: ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆ.24ರಂದು  ಶಿಕ್ಷಕ-ರಕ್ಷಕ ಸಂಘದ ಸಭೆಯು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ನಸೀರ್ ಅಹಮದ್ ಖಾನ್ ರವರು ವಹಿಸಿ ವಿದ್ಯಾರ್ಜನೆಯೇ ವಿದ್ಯಾರ್ಥಿ ಜೀವನದ ಗುರಿ.ಅಧ್ಯಯನ ಮತ್ತು ಸಹಕಾರ ಮನೋಭಾವವನ್ನು ಮೂಡಿಸುವ ಮೂಲಕ ವಿದ್ಯಾರ್ಥಿಗಳನ್ನು ಯಶಸ್ಸಿನ ಶಿಖರದತ್ತ ಕೊಂಡೊಯ್ಯುವ ಜವಾಬ್ದಾರಿ ಹೆತ್ತವರಿಗಿದೆ ಎಂದು ಹೇಳಿ,ಸಭೆಯಲ್ಲಿ ಪೋಷಕರ ಸಕ್ರಿಯ ಭಾಗವಹಿಸುವಿಕೆಗೆ ಮೆಚ್ಚುಗೆ ವ್ಯಕ್ತಪಡಿಸಿದರು .

ಶಾಲಾ ಮುಖ್ಯೋಪಾಧ್ಯಯ ಶಾಂತಿರಾಜ್ ಜೈನ್ ರವರು ಶಾಲಾ ವಾರ್ಷಿಕ,ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

2022-23ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ತರುವ ನಿಟ್ಟಿನಲ್ಲಿ ವಿಶೇಷ ತರಗತಿಗಳನ್ನು ನಡೆಸುವ ಕುರಿತು ಚರ್ಚಿಸಲಾಯಿತು. ಹಾಗೂ ಪೋಷಕರ ಅನುಮತಿಯ ಮೇರೆಗೆ ಡಿಸೆಂಬರ್ 31ರ ಒಳಗೆ ಶಾಲಾ ಶೈಕ್ಷಣಿಕ ವಾರ್ಷಿಕೋತ್ಸವವನ್ನು ಆಚರಿಸುವುದಾಗಿ ತೀರ್ಮಾನಿಸಲಾಯಿತು.

ವೇದಿಕೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರುಗಳಾದ  ಹರಿಣಾಕ್ಷಿ ಮತ್ತು  ವೀರೇಂದ್ರ ಕುಮಾರ್ ರವರು ಉಪಸ್ಥಿತರಿದ್ದು ಶಾಲಾ ಕಲಿಕಾ ವಾತಾವರಣದ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು .

ಈ ಕಾರ್ಯಕ್ರಮದಲ್ಲಿ ಪೋಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದವರು ಪಾಲ್ಗೊಂಡಿದ್ದರು. ಶಾಲಾ ಶಿಕ್ಷಕಿ  ಕಾವ್ಯಶ್ರೀ ಕಾರ್ಯಕ್ರಮವನ್ನು ಸ್ವಾಗತಿಸಿ, ನಿರೂಪಿಸಿದರು. ಅಶ್ಮಿತಾ ವಂದನಾರ್ಪಣೆಗೈದರು.

LEAVE A REPLY

Please enter your comment!
Please enter your name here