ಹಾಸನದಿಂದ ಧರ್ಮಸ್ಥಳಕ್ಕೆ ಬಂದು ಕಾಡಿನಲ್ಲಿ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ : ಆಸ್ಪತ್ರೆಗೆ ದಾಖಲಿಸಿದ ಪೊಲೀಸರು

0

ಧರ್ಮಸ್ಥಳ: ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥಪುರದ ನಿವಾಸಿ ಸುನಿಲ್ (28ವ) ಎಂಬತ ತನ್ನ ಹೀರೋ ಹೊಂಡಾ ಬೈಕ್‌ನಲ್ಲಿ ಧರ್ಮಸ್ಥಳಕ್ಕೆ ಬಂದು ಪಾಂಗಾಳ ರಸ್ತೆಯ ಮಹಾತ್ಮಾ ಗಾಂಧಿ ವೃತ್ತದ ಪಕ್ಕದ ಗುಡ್ಡದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೆ.28ರಂದು ವರದಿಯಾಗಿದೆ.
ಬೆಳಿಗ್ಗೆ ದೇವರ ದರ್ಶನ ಮುಗಿಸಿ ಮಧ್ಯಾಹ್ನದ ನಂತರ ಗುಡ್ಡಕ್ಕೆ ಹೋಗಿ ಕುಳಿತು ತನ್ನ ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿ ಕೃಷಿ ಜಾಮೀನಿಗೆ ವಿಷ ಪದಾರ್ಥ ಕುಡಿದಿದ್ದಾನೆ. ಜಾಗ ಪೊಟೋ, ವಿಷ ಕುಡಿಯುವ ಪೊಟೋವನ್ನು ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಕಳುಹಿಸಿದ್ದಾನೆ ಎನ್ನಲಾಗಿದೆ. ಇದನ್ನು ನೋಡಿದ ಕುಟುಂಬದವರು ಮತ್ತು ಸ್ನೇಹಿತರು ಧರ್ಮಸ್ಥಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ತಕ್ಷಣ ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಹೋಗಿ ಕಾಡಿನ ಸುತ್ತಮುತ್ತ ಹುಡುಕಾಟ ನಡೆಸಿದಾಗ ಆತ ಅರೆಪ್ರಜ್ಞಾ ಸ್ಥಿತಿಯಲ್ಲಿದ್ದ ತಕ್ಷಣ ಪೊಲೀಸರು ವಾಹನದಲ್ಲಿ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here