ಗಾಂಧಿ ಜಯಂತಿ ಪ್ರಯುಕ್ತ ನಾಳೆ ಮಾಂಸ ಮಾರಾಟ ಹಾಗೂ ಮದ್ಯ ಮಾರಾಟ ನಿಷೇಧ

0

ಬೆಳ್ತಂಗಡಿ: ಪ್ರತೀ ವರ್ಷದಂತೆ ಗಾಂಧಿ ಜಯಂತಿ ಪ್ರಯುಕ್ತ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ಹಾಗೂ ಮದ್ಯ ಮಾರಾಟ ನಿಷೇಧಿಸಿರುವಂತೆ ಈ ವರ್ಷವು ನಿಷೇಧ ಹೇರಲಾಗಿದೆ. ನಾಳೆ ಗಾಂಧಿ ಜಯಂತಿ ಪ್ರಯುಕ್ತ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟ ಹಾಗೂ ಮದ್ಯ ಮಾರಾಟ ನಿಷೇಧಿಸುವಂತೆ ರಾಜ್ಯ ಪಶುಸಂಗೋಪನಾ ಇಲಾಖೆ ಹಾಗೂ ಅಬಕಾರಿ ಇಲಾಖೆ ಆದೇಶ ಹೊರಡಿಸಿದೆ.

ಈ ನಿಯಮ ಚಿಲ್ಲರೆ ಅಂಗಡಿಗಳಿಗೂ ಅನ್ವಯಿಸುತ್ತದೆ. ನಗರದ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಸುತ್ತೋಲೆ ಉಲ್ಲೇಖಿಸಲಾಗಿದೆ.

LEAVE A REPLY

Please enter your comment!
Please enter your name here