ಕಾಶಿಪಟ್ಣ ಗ್ರಾಮ ಪಂಚಾಯತಿನಲ್ಲಿ ಗಾಂಧೀ ಜಯಂತಿ ಆಚರಣೆ

0

ಕಾಶಿಪಟ್ಣ: ಮಹಾತ್ಮ ಗಾಂಧಿಜೀಯವರ 153ನೇ ಜಯಂತಿಯನ್ನು ಕಾಶಿಪಟ್ಣ ಗ್ರಾಮ ಪಂಚಾಯತಿನಲ್ಲಿ ಹಮ್ಮಿಕೊಳ್ಳಲಾಯಿತು. 2022-23ನೇ ಸಾಲಿನ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಹೆಚ್ಚುವರಿ ಕ್ರಿಯಾ ಯೋಜನೆ ಬಗ್ಗೆ , 2023-24ನೇ ಸಾಲಿನ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕಾರ್ಮಿಕ ಆಯವ್ಯಯ ದ ತಯಾರಿಯ ಕುರಿತು , ಗ್ರಾಮ ನೈರ್ಮಲ್ಯ ಯೋಜನೆ ಅನುಮೋದನೆ ಹಾಗೂ PMAY ಯೋಜನೆಯಡಿ ಅರ್ಹ ಫಲಾನುಭವಿಗಳ ಆಯ್ಕೆ ಕುರಿತು ವಿಶೇಷ ಗ್ರಾಮ ಸಭೆಯನ್ನು ಹಮ್ಮಿಕೊಳ್ಳಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಿಲ್ಪಾ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ವಿಶೇಷ ಗ್ರಾಮ ಸಭೆಯಲ್ಲಿ ಸರ್ಕಾರದ ಆದೇಶದಂತೆ ‘ಏಕಬಳಕೆ ಪ್ಲಾಸ್ಟಿಕ್ ನಿಷೇಧದ ಬಗ್ಗೆ’ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡಿದರೆ ದಂಡ ವಿಧಿಸುವ ಕುರಿತಂತೆ ಠರಾವು ಮಂಡಿಸಿ ಸಭೆಯ ಅನುಮೋದನೆಯನ್ನು ಪಡೆಯಲಾಯಿತು.

ಸ್ವಚ್ಛತಾ ಹೀ ಸೇವಾ ದಡಿ ಸ್ವಚ್ಛತಾ ಜಾಥಾವನ್ನು ಕೈಗೊಳ್ಳಲಾಯಿತು.

ಸಭೆಯಲ್ಲಿ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾ.ಪಂ ಅಧಿಕಾರಿ /ಸಿಬ್ಬಂದಿ ವರ್ಗದವರು, ಗ್ರಾಮದ ಇತರ ಪ್ರಮುಖರು ಭಾಗವಹಿಸಿದರು.

LEAVE A REPLY

Please enter your comment!
Please enter your name here