ಬೆಳಾಲು ಶ್ರೀ ಧ. ಮ. ಪ್ರೌಡಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

0

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯನ್ನು ಅ.2 ರಂದು ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸುಲೈಮಾನ್ ಭೀಮಂಡೆ ಈರ್ವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡುತ್ತಾ ; ಮಹಾತ್ಮರ ಜನ್ಮ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿ, ಕೇವಲ ಆಚರಣೆ ಸಾಲದು ಅಂತವರ ಗುಣಗಳ ಪಾಲನೆಯ ಅನಿವಾರ್ಯತೆಯಿದೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಮಹಾತ್ಮರ ಬಗೆಗಿನ ಅನಿಸಿಕೆಗಳನ್ನು ವಿದ್ಯಾರ್ಥಿಗಳಾದ ಪ್ರಾರ್ಥನಾ ಮತ್ತು ಅಮೂಲ್ಯರವರು ವ್ಯಕ್ತಪಡಿಸಿದರು. ವಿದ್ಯಾರ್ಥಿನಿ ನೂರುನ್ನಿಹಾ ಗಾಂಧೀಜಿಯವರ ಕುರಿತಾದ ಗೀತೆಯನ್ನು ಹಾಡಿದರು. ಶಾಲಾ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶಿಕ್ಷಕರು, ಸಿಬ್ಬಂದಿಯವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ತೀರ್ಥೆಶ ಸ್ವಾಗತಿಸಿ, ತೃಷಾ ವಂದಿಸಿದರು. ಲಿಖಿತಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here