ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ಗಾಂಧಿಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮಜಯಂತಿ ಆಚರಣೆ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜ್, ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ(ಎನ್.ಎಸ್.ಎಸ್) ಇದರ ಸಹಯೋಗದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಮತ್ತು ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜನ್ಮಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ.ಜೋಸೆಫ್ ಎನ್.ಎಂ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಹತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ರ್ತೀಯವರ ಭಾವಚಿತ್ರಗಳಿಗೆ ಪುಷ್ಪಾರ್ಚನೆಯನ್ನು ಮಾಡಿ ಗೌರವಿಸಲಾಯಿತು.

ನಂತರ ಪ್ರಾಂಶುಪಾಲರ ನೇತೃತ್ವದಲ್ಲಿ ಗಾಂಧೀಜಿಯವರ ನೆಚ್ಚಿನ ರಘುಪತಿ ರಾಘವ ರಾಜಾರಾಮ್ ಗೀತೆಯನ್ನು ಹಾಡಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಎನ್.ಎಸ್.ಎಸ್ ಯೋಜನಾಧಿಕಾರಿಯಾದ ಪ್ರೊ.ಪ್ರಶಾಂತ್.ಎಂ ಹಾಗೂ ಎನ್.ಎಸ್.ಎಸ್ ಸ್ವಯಂ ಸೇವಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here