ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ

0


ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತು ನಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಅ.2 ರಂದು ಆಚರಿಸಲಾಯಿತು. ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆ ಮಂಜೂರಾತಿ, 2023-2024 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕ್ರಿಯಾಯೋಜನೆ ತಯಾರಿ, ಗ್ರಾಮ ನೈರ್ಮಲ್ಯ ಕಾಮಗಾರಿ ಕ್ರಿಯಾಯೋಜನೆ ಮತ್ತು ಅಮೃತ ಗ್ರಾಮ ಪಂಚಾಯಿತಿ ನ ಪ್ರೋತ್ಸಾಹಧನ ಕಾಮಗಾರಿ ಕ್ರಿಯಾಯೋಜನೆ ಮಂಜೂರಾತಿ ಬಗ್ಗೆ ವಿಶೇಷ ಗ್ರಾಮ ಸಭೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಸ್ವಚ್ಛತಾ ನೌಕರರನ್ನು ಗೌರವಿಸಲಾಯಿತು. ಗ್ರಾಮದ ವಿವಿಧ ಕಡೆಗಳಲ್ಲಿ ಸ್ವಚ್ಛತೆಯ ಕಾರ್ಯಕ್ರಮವನ್ನು ನಡೆಸಲಾಯಿತು.

ಪಂಚಾಯತ್ ಅಧ್ಯಕ್ಷೆ ಜಯ ಮೋನಪ್ಪ ಗೌಡ, ಪಿಡಿಓ ಉಮೇಶ್ ಕೆ.,ಪಂಚಾಯತ್ ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು, ಸಂಘ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here