ಸ.ಉ.ಪ್ರಾ ಶಾಲೆ ಬಳಂಜದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಶಿಬಿರ

0

ಬಳಂಜ:  ಶಾಲಾ ಶಿಕ್ಷಕರೊಂದಿಗೆ ಜೀವನ ಶಿಕ್ಷಣವನ್ನು ಪಡೆದಾಗ ಯಶಸ್ಸನ್ನು ಪಡೆಯಲು ಸಾಧ್ಯವಾಗುವುದು ಎಂದು ವಿಧಾನ ಪರಿಷತ್ ಶಾಸಕ ಕೆ ಪ್ರತಾಪ್ ಸಿಂಹ ನಾಯಕ್ ಹೇಳಿದರು.

ಅವರು ಸರಕಾರಿ ಉನ್ನತಿ ಕರೆಸಿದ ಪ್ರಾಥಮಿಕ ಶಾಲೆ ಬಳಂಜದಲ್ಲಿ  ನಡೆಯುವ ವಾಣಿಜ್ಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಜೀವನ ಅನುಭವವು ಆಗರ ಶಿಬಿರಾರ್ಥಿಗಳು ತಮ್ಮನ್ನ ಸಂಪೂರ್ಣವಾಗಿ ತೊಡಗಿ ಕೊಳ್ಳುವುದರ ಮೂಲಕ ಜೀವನದ ಉದ್ದೇಶವನ್ನು ಈಡೇರಿಸಿಕೊಳ್ಳಬಹುದು ಪದವಿಯೊಂದಿಗೆ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು ಒಳ್ಳೆಯದು ಕೆಟ್ಟದರ ಬಗ್ಗೆ ತಿಳಿದುಕೊಂಡು ದೇಶದ ಪರಿವರ್ತನೆಯನ್ನು ಸಾಧಿಸಬೇಕು ಎಂದರು.

ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು.  ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ವಸಂತ ಸಾಲ್ಯನ್ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಸತೀಶ್ ರೈ ಬಾರ್ದಡ್ಕ,  ಪ್ರಗತಿಪರ ಕೃಷಿಕರು ಅನಿಲ್ ಕುಮಾರ್ ಮಾಳಿಗೆ ಮನೆ , ಚಂದ್ರರಾಜ ಪೂವಣಿ, ಬಳಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ  ಬೇಬಿ,  ಸದಸ್ಯರಾದ ಯಶೋಧರ  ಶೆಟ್ಟಿ,    ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರತ್ನಾಕರ ಪೂಜಾರಿ,  ಶಿಬಿರ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಸುರೇಶ್ ಶೆಟ್ಟಿ ,ಶಾಲಾ ಮುಖ್ಯೋಪಾಧ್ಯಾಯರಾದ ವಿಲ್ಲೆಡ್ ಪಿಂಟೊ,  ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಸುಲೋಚನ , ವಾಣಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಪ್ರಸ್ತಾವನೆ ಯೊಂದಿಗೆ ಸ್ವಾಗತಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಶಂಕರ್ ರಾವ್,  ಏನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಶಂಕರ್  ವಂದಿಸಿದರು.  ಸಹ ಕಾರ್ಯಕ್ರಮಾಧಿಕಾರಿ ಕು| ಕಾಮಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here