ಗ್ರಾ. ಪಂ ಚುನಾಯಿತ ಪ್ರತಿನಿಧಿಗಳ ಅಧಿಕಾರ ಮೊಟಕು ಗೊಳಿಸುವ ಸರ್ಕಾರದ ನಿರ್ಧಾರ ಪ್ರಜಾಪ್ರಭುತ್ವದ ವಿರೋಧಿ ನಡೆ :ರಕ್ಷಿತ್ ಶಿವರಾಂ

0

 

ಬೆಳ್ತಂಗಡಿ: ಪಂಚಾಯತ್ ರಾಜ್ ಕಾಯ್ದೆಯ 64ರಿಂದ 70 ರವರೆಗಿನ ನಿಯಮಗಳಿಗೆ ತಿದ್ದುಪಡಿ ತಂದು ಗ್ರಾಮ ಪಂಚಾಯತ್ ಅಧ್ಯಕ್ಷರುಗಳ ಅಧಿಕಾರವನ್ನು ಕಿತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ನೀಡಲಾಗಿದೆ. ಅಧಿಕಾರಿಗಳ ಮೂಲಕ ಚುನಾಯಿತ ಪ್ರತಿನಿಧಿಗಳನ್ನು ನಿಯಂತ್ರಿಸುವ ಪ್ರಯತ್ನದ ಫಲ ಈ ಅಧಿಸೂಚನೆಯಾಗಿದೆ.

ಚುನಾಯಿತ ಗ್ರಾಮ ಪಂಚಾಯತ್ ಸದಸ್ಯರ ಅಧಿಕಾರ ಮೊಟಕುಗೋಳಿಸುವ ಸರ್ಕಾರದ ಈ ನಿರ್ಧಾರ ಪ್ರಜಾಪ್ರಭುತ್ವದ ವಿರೋಧಿ ನಡೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅಭಿಪ್ರಾಯ ಪಟ್ಟಿದ್ದಾರೆ.

ಗ್ರಾಮ ಪಂಚಾಯಿತಿಗಳು ಹಳ್ಳಿಗಳ ಸರ್ಕಾರ ಇದ್ದಂತೆ. ಅಧಿಕಾರ ವಿಕೇಂದ್ರೀಕರಣ ಮಾಡಿ ಗ್ರಾಮ ಸ್ವರಾಜ್ಯಕ್ಕೆ ನಾಂದಿ ಹಾಡಿದ ಮೊದಲ ರಾಜ್ಯ ಕರ್ನಾಟಕ. ಆದರೆ, ಈಗ ಸರ್ಕಾರ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಯಯಲ್ಲಿ ತಿದ್ದುಪಡಿ ತಂದು ಚುನಾಯಿತ ಪ್ರತಿನಿಧಿಗಳ ಕರ್ತವ್ಯದಲ್ಲಿ ಅಧಿಕಾರಶಾಹಿ ಹಸ್ತಕ್ಷೇಪ ಮಾಡುವ ಪ್ರಯತ್ನಕ್ಕೆ ಸರ್ಕಾರ ದಾರಿ ಮಾಡಿಕೊಡುತ್ತಿದೆ. ಇದರಿಂದಾಗಿ ಗ್ರಾಮ ಪಂಚಾಯತ್ ಗಳು ಭೃಷ್ಟಾಚಾರದ ಕೊಂಪೆಯಾಗುವ ಸಾಧ್ಯತೆಯೊಂದಿಗೆ , ಜನಪ್ರತಿನಿಧಿಗಳು ಹಲ್ಲು ಕಿತ್ತ ಹಾವಿನಂತಾಗುತ್ತಾರೆ ಎಂದು ಆತಂಕ ವ್ಯಕ್ತಪಡಿಸಿರುವ ಅವರು ತಕ್ಷಣ ಗ್ರಾಮ ಪಂಚಾಯತ್ ಸದಸ್ಯರ ಅಧಿಕಾರ ಮೊಟಕುಗೊಳಿಸುವ ವಿವಾದಾತ್ಮಕ ತಿದ್ದುಪಡಿಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here