ಎಸ್ ಡಿ ಪಿ ಐ ಪಾಂಡವರಕಲ್ಲು ವತಿಯಿಂದ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮ

0

ಪಾಂಡವರಕಲ್ಲು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಾಂಡವರಕಲ್ಲು ವತಿಯಿಂದ ಅರ್ಹ ಕುಟುಂಬಕ್ಕೆ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮವು ಅ.7ರಂದು ಜರುಗಿತು.

ಎಸ್ ಡಿ ಪಿ ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್ ತುಂಬೆ ವಿಶೇಷ ಅತಿಥಿಯಾಗಿ ಆಗಮಿಸಿ, ಮನೆಯ ಕೀಲಿ ಹಸ್ತಾಂತರಿಸುವ ಮೂಲಕ ನೂತನ ಮನೆಯನ್ನು ಉದ್ಘಾಟನೆಗೈದರು. ಬದ್ರಿಯಾ ಜುಮ್ಮಾ ಮಸ್ಜಿದ್ ಪಾಂಡವರಕಲ್ಲು ಇದರ ಖತೀಬರಾದ ರಿಯಾಝ್ ಫೈಝಿ ದುಆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಮೂನಿಶ್ ಆಲಿ ಬಂಟ್ವಾಳ, ಬದ್ರಿಯಾ ಜುಮ್ಮಾ ಮಸ್ಜಿದ್ ಪಾಂಡವರಕಲ್ಲು ಅಧ್ಯಕ್ಷ ಹಾಗೂ ಬಡಗ ಕಜೆಕಾರು ಗ್ರಾಮ ಪಂಚಾಯತ್ ಸದಸ್ಯ ಅತಾವುಲ್ಲಾ ಪಾಂಡವರಕಲ್ಲು, ಜಮಾಅತ್ ಉಪಾಧ್ಯಕ್ಷ ಹಕೀಂ ಕುದುರು, ಜಮಾಅತ್ ಪ್ರಧಾನ ಕಾರ್ಯದರ್ಶಿ ಕೆ ಪಿ ಉಮರ್ ಮುಸ್ಲಿಯಾರ್, ಎಸ್ ಡಿ ಪಿ ಐ ಬಡಗ ಕಜೆಕಾರು ಗ್ರಾಮ ಸಮಿತಿ ಅಧ್ಯಕ್ಷ ಸಾದಿಕ್ ಕೆ ಪಿ ,ಎಸ್ ಡಿ ಪಿ ಐ ದ.ಕ ಜಿಲ್ಲಾ ಸಮಿತಿ ಸದಸ್ಯ ಯೂಸುಫ್ ಆಲಡ್ಕ, ಎಸ್ ಡಿ ಪಿ ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷ ಹನೀಫ್ ಪುಂಜಾಲಕಟ್ಟೆ, ಎಸ್ ಡಿ ಪಿ ಐ ಬಂಟ್ವಾಳ ಕ್ಷೇತ್ರ ಸಮಿತಿ ಸದಸ್ಯರಾದ ಇಮ್ರಾನ್ ಪಾಂಡವರಕಲ್ಲು, ಎಸ್ ಡಿ ಪಿ ಐ ಬಂಟ್ವಾಳ ಪುರಸಭಾ ಸಮಿತಿ ಕಾರ್ಯದರ್ಶಿ ಇಕ್ಬಾಲ್ ಮೈನ್ಸ್, ಜಮಾಅತ್ ಮಾಜಿ ಅಧ್ಯಕ್ಷರಾದ ಪುತ್ತುಮೋನು ಕುದುರು ಹಾಗೂ ಕಾರ್ಯಕರ್ತರು, ಹಿತೈಷಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here