ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿ ವಿಶಿಷ್ಟ ರೀತಿಯಲ್ಲಿ ಗಾಂಧಿ ಜಯಂತಿ ಆಚರಣೆ

0

ಬೆಳ್ತಂಗಡಿ: ಸುವರ್ಣ ಮಹೋತ್ಸವ ಸಮಿತಿ, ಸರಕಾರಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಪಟ್ಟಣ ಪಂಚಾಯತ್, ಬೆಳ್ತಂಗಡಿ ರೋಟರಿ ಕ್ಲಬ್ ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯನ್ನು ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಸುವುದರ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ ನೆರವೇರಿಸಿದರು.

ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಅಧ್ಯಕ್ಷರಾದ  ಮನೋರಮ ಭಟ್ ವಹಿಸಿದ್ದರು.

ಮುಖ್ಯ ಅತಿಥಿಗಳು ಬೆಳ್ತಂಗಡಿ ಪ.ಪಂ ಉಪಾಧ್ಯಕ್ಷ  ಜಯಾನಂದ ಗೌಡ, ನಿವೃತ್ತ ಎಸ್ ಪಿ ಮತ್ತು ಸಂಸ್ಥೆಯ ಹಿರಿಯ ವಿದ್ಯಾರ್ಥಿ  ಪೀತಾಂಬರ ಹೆರಾಜೆ ,
ಬೆಳ್ತಂಗಡಿ ಪಟ್ಟಣ ಪಂಚಾಯತ್  ಮುಖ್ಯ ಅಧಿಕಾರಿಗಳು ರಾಜೇಶ್,   ಲೋಕೇಶ್ ಸದಸ್ಯರು ಪಟ್ಟಣ ಪಂಚಾಯತ್ ಬೆಳ್ತಂಗಡಿ,  ರೊನಾಲ್ಡ್ ಲೋಬೊ ಕಾರ್ಯಾಧ್ಯಕ್ಷರು ಸುವರ್ಣ ಮಹೋತ್ಸವ ಸಮಿತಿ,
ರಕ್ಷಾ ರಾಗ್ನೇಶ್ ಕಾರ್ಯದರ್ಶಿಗಳು ರೋಟರಿ ಕ್ಲಬ್ ಹಾಗೂ ಉಪನ್ಯಾಸಕರು ರೋಟರಿ ಕ್ಲಬ್ ಸದಸ್ಯರು ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ರೋಟರಿ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಕಾಲೇಜು ಮತ್ತು ಪ್ರೌಢಶಾಲಾ ತರಗತಿಗಳಿಗೆ ಡಸ್ಟ್ ಬಿನ್ ಬಾಕ್ಸ್ ಗಳನ್ನು ಉಚಿತವಾಗಿ ವಿತರಿಸಲಾಯಿತು. ಪಟ್ಟಣ ಪಂಚಾಯತ್ ಬೆಳ್ತಂಗಡಿಯವರು ಶುಚಿ ರುಚಿಯಾದ ಉಪಹಾರ ವ್ಯವಸ್ಥೆಯನ್ನು ಮಾಡಿದರು ಕಾಲೇಜಿನ ಆವರಣ ಸಂತೆಕಟ್ಟೆ ಸುತ್ತಮುತ್ತ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸುವುದರ ಮೂಲಕ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಪ್ರಾಂಶುಪಾಲರಾದ  ಸುಕುಮಾರ್ ಜೈನ್ ಸ್ವಾಗತಿಸಿದರು.  ಬಿಕೆ ಧನಂಜಯ್ ರಾವ್ ಅಧ್ಯಕ್ಷರು ಸುವರ್ಣ ಮಹೋತ್ಸವ ಸಮಿತಿ ವಂದನರ್ಪಣೆಗೈದರು. ಡಾಕ್ಟರ್ ಗಣೇಶ್ ಭಟ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here