ಉಜಿರೆ ಗ್ರಾಮ ಪಂಚಾಯತ್ ಗ್ರಾಮ ಸಭೆ

0


ಉಜಿರೆ : ಉಜಿರೆ ಗ್ರಾಮ ಪಂಚಾಯತ್ 2022-23ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಅ.11 ರಂದು ಉಜಿರೆ “ಶಾರದಾ ಮಂಟಪದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ  ಪುಷ್ಪಾವತಿ ಆರ್. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು .

ನೆರಿಯ ಪಶು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಯತೀಶ್ ಕುಮಾರ್ ಇವರು ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಿ ಸಭೆಯನ್ನು ಮುನ್ನಡೆಸಿದರು. ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಪಂಚಾಯತ್ ಸದಸ್ಯರು, ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪಂ.ಅಭಿವೃದ್ಧಿ ಅಧಿಕಾರಿ ಪಿ. ಎಚ್. ಪ್ರಕಾಶ್ ಶೆಟ್ಟಿ ಸ್ವಾಗತಿಸಿದರು ಕಾರ್ಯದರ್ಶಿ ಜಯಂತ್ ಯು. ಬಿ. ವರದಿ ವಾಚಿಸಿದರು. ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು. ಇಲಾಖೆಯ ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು. ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here