ಧರ್ಮಸ್ಥಳ: ಅಪರಿಚಿತ ವೃದ್ಧನಿಗೆ ಡಿಕ್ಕಿ ಹೊಡೆದು ಪರಾರಿಯಾದ ವಾಹನ: ಗಂಭೀರ ಗಾಯಗೊಂಡಿದ್ದ ವೃದ್ಧ ಚಿಕಿತ್ಸೆ ಫಲಕಾರಿಯಾಗದೆ ಸಾವು

0

ಧರ್ಮಸ್ಥಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ವೃದ್ಧರೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾದ ಘಟನೆ ಧರ್ಮಸ್ಥಳದ ಶಾಂತಿವನದ ಸಮೀಪ ನಡೆದಿದೆ.

ಡಿಕ್ಕಿಯ ರಭಸಕ್ಕೆ ವೃದ್ಧನಿಗೆ ಗಂಭೀರ ಗಾಯವಾಗಿದ್ದು ರಸ್ತೆ ಬದಿಯಲ್ಲಿ ಬಿದ್ದಿದ್ದರು ಅವರನ್ನು ಸ್ಥಳೀಯರ ಸಹಕಾರದೊಂದಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾದರೂ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಅಪರಿಚಿತ ವ್ಯಕ್ತಿ ವಯಸ್ಸು 50ರಿಂದ 60 ವರ್ಷ ಎಂದು ಅಂದಾಜಿಸಲಾಗಿದೆ. ಅವರ ವಿಳಾಸದ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ.

ಡಿಕ್ಕಿ ಹೊಡೆದ ವಾಹನ ಚಾಲಕ, ವಾಹನ ನಿಲ್ಲಿಸದೆ ಪರಾರಿಯಾಗಿದ್ದು ವಾಹನದ ಬಗ್ಗೆಯೂ ಯಾವುದೇ ಮಾಹಿತಿ ತಿಳಿದು ಬಂದಿಲ್ಲ. ವಾಹನದ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು, ಘಟನೆಯ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

LEAVE A REPLY

Please enter your comment!
Please enter your name here